ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರ ಹರಿವು: ಆದಾಯದಲ್ಲಿ ಹೊಸ ದಾಖಲೆ!
ಕರ್ನಾಟಕದ ಅತ್ಯಂತ ಶ್ರೀಮಂತ ದೇವಾಲಯ ಅನ್ನೋ ಖ್ಯಾತಿಗೆ ಪಾತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕರ್ನಾಟಕ ಸರಕಾರದ ಮುಜರಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಪೈಕಿ ಆದಾಯಗಳಿಕೆಯಲ್ಲಿ ನಂಬರ್ 1 ಸ್ಥಾನ ಕಾಯ್ದುಕೊಂಡಿದೆ.
ಕರ್ನಾಟಕದ ಅತ್ಯಂತ ಶ್ರೀಮಂತ ದೇವಾಲಯ ಅನ್ನೋ ಖ್ಯಾತಿಗೆ ಪಾತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕರ್ನಾಟಕ ಸರಕಾರದ ಮುಜರಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಪೈಕಿ ಆದಾಯಗಳಿಕೆಯಲ್ಲಿ ನಂಬರ್ 1 ಸ್ಥಾನ ಕಾಯ್ದುಕೊಂಡಿದೆ. ಈ ಸಾಧನೆಯ ಬೆನ್ನಲ್ಲೇ ಇದೀಗ ದೇವಾಲಯದ ಆಡಳಿತ ಮಂಡಳಿ ಭಕ್ತರ ಅನುಕೂಲಕ್ಕಾಗಿ ಗುಡ್ನ್ಯೂಸ್ ಒಂದನ್ನು ಕೊಟ್ಟಿದೆ.
ರಜಾಕಾಲವಾಗಿರುವ ಕಾರಣಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಬಾರೀ ಏರಿಕೆ ಕಾಣುತ್ತಿದೆ. ಅದ್ರಲ್ಲೂ ವಾರಾಂತ್ಯದಲ್ಲಿ ಕಿಲೋ ಮೀಟರ್ ದೂರದವರೆಗೂ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿ ಭಕ್ತರ ಅನುಕೂಲಕ್ಕಾಗಿ ದಿನದಲ್ಲಿ ಒಂದು ಗಂಟೆ ಹೆಚ್ಚುವರಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದೆ.
ಇದುವರೆಗೆ ನಿತ್ಯವೂ ಮಧ್ಯಾಹ್ನ 1.30 ರಿಂದ 3.30ರವರೆಗೆ ದೇವಸ್ಥಾನದ ಬಾಗಿಲು ಬಂದ್ ಮಾಡಲಾಗುತ್ತಿತ್ತು. ಆದರೆ ಇನ್ಮುಂದೆ ಮಧ್ಯಾಹ್ನ 2ರಿಂದ 3 ಗಂಟೆಯ ವರೆಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಇರೋದಿಲ್ಲ. ಹೀಗಾಗಿ ನಿತ್ಯವೂ ಒಂದು ಗಂಟೆಗಳ ಕಾಲ ಹೆಚ್ಚುವರಿಯಾಗಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ದೊರೆಯಲಿದೆ.
Also Read: ಹೊಸ ಅಬಕಾರಿ ನೀತಿ ಜಾರಿ: ಬಡವರಿಗೆ ಮದ್ಯ ದುಬಾರಿ, ಶ್ರೀಮಂತರಿಗೆ ಎಣ್ಣೆ ಅಗ್ಗ!
ಸರ್ಪಸಂಸ್ಥಾರ, ಆಶ್ಲೇಷ ಬಲಿ ಪೂಜೆ ಸೇರಿದಂತೆ ಕುಕ್ಕೆ ಸುಬ್ರಹ್ಮಣ್ಯ ದೇವರ ಕಾಣಿಗೆ ಹುಂಡಿಗೆ ನಿತ್ಯವೂ ಲಕ್ಷಾಂತರ ರೂಪಾಯಿ ಆದಾಯ ಹರಿದು ಬರುತ್ತಿದೆ. ಇದೀಗ ದೇವಾಲಯಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಹೆಚ್ಚುವರಿ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ದೂರದ ಊರುಗಳಿಂದ ತಡವಾಗಿ ದೇವಾಲಯ ತಲುಪುವ ಭಕ್ತರಿಗೂ ಹೆಚ್ಚು ಅನುಕೂಲವಾಗಲಿದೆ.
Inflow of devotees to Kukke Subrahmanya New record in revenue



