ಯಕ್ಷಗಾನ ಕಲಾವಿದರಿಗೆ ಅವಮಾನ : ಸದನದಲ್ಲಿ ಸುನಿಲ್ ಕುಮಾರ್ ಆಕ್ರೋಶ
ಬೆಳಗಾವಿ : ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿರುವ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ವಿರುದ್ದ ಯಾಕೆ ಕ್ರಮಕೈಗೊಂಡಿಲ್ಲ ಎಂದು ಸದನದಲ್ಲಿ ಬಿಜೆಪಿ ಹಿರಿಯ ಶಾಸಕರಾದ ವಿ ಸುನಿಲ್ ಕುಮಾರ್ (Sunil Kumar) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ಬಿಳಿಮಲೆ ಅವರು ಆಡಿದ ಮಾತಿಗೆ ಕ್ಷಮೆಯಾಚಿಸಿದ್ದಾರೆ ಎಂದು ಹೇಳಿದರು. ಆದರೆ ಬಿಳಿಮಲೆ ಅವರು ಕ್ಷಮೆಯಾಚಿಸಿದ್ದರೂ ಕೂಡ ಯಕ್ಷಗಾನ ಕಲಾವಿದರ ಬಗ್ಗೆ ತಾವು ಆಡಿದ ಮಾತುಗಳಿಗೆ ನಾನು ಇಂದಿಗೂ ಬದ್ದವಾಗಿದ್ದೇನೆ. ಈ ಕುರಿತು ಚರ್ಚೆಗೆ ಬರಲಿ ಎಂದು ಹೇಳಿದ್ದಾರೆ.
ಇದರಲ್ಲಿ ಬಿಳಿಮಲೆ ಅವರು ಕ್ಷಮೆಯಾಚಿಸುವ ಪ್ರಶ್ನೆ ಏನಿದೆ ಎಂದು ಸುನಿಲ್ ಕುಮಾರ್ ಸದನದಲ್ಲಿ ಪ್ರಶ್ನಿಸಿದ್ದಾರೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರ ವಜಾಕ್ಕೆ ಆಗ್ರಹಿಸಿ ಈಗಾಗಲೇ ಕರಾವಳಿ ಭಾಗದ ಹಲವರು ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
Also Read: ರಾಜಭವನಕ್ಕೆ ಲೋಕಭವನವೆಂದು ಮರುನಾಮಕರಣ : ಕೇಂದ್ರದ ನಡೆಗೆ ರಾಜ್ಯ ಸರ್ಕಾರದಿಂದ ಆಕ್ಷೇಪ
ಆದರೂ ಸರಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಕ್ಷಗಾನ ಹಾಗೂ ಕಲಾವಿದರಿಗೆ ಅವಮಾನ ಮಾಡಿರುವ ಬಿಳಿಮಲೆ ಅವರ ವಿರುದ್ದ ಸರಕಾರ ಕ್ರಮಕೈಗೊಳ್ಳಬೇಕು.
ಕನಿಷ್ಠ ಪುರುಷೋತ್ತಮ ಬಿಳಿಮಲೆ ಅವರ ವಿರುದ್ದ ನೋಟಿಸ್ ಜಾರಿ ಮಾಡಬೇಕು ಎಂದು ಸುನಿಲ್ ಕುಮಾರ್ ಅವರು ಆಗ್ರಹಿಸಿದ್ದಾರೆ. ಕೊನೆಗೆ ಸಚಿವ ಶಿವರಾಜ್ ತಂಗಡಗಿ ಅವರು ಮಾತನಾಡಿ, ಬಿಳಿಮಲೆ ಅವರು ಕ್ಷಮೆಯಾಚಿಸಿದ್ದಾರೆ. ಒಂದೊಮ್ಮೆ ಮುಂದೆ ಯಾರೇ ಇಂತಹ ಹೇಳಿಕೆ ನೀಡಿದ್ದರೂ ಕೂಡ ಅವರ ವಿರುದ್ದ ಸರಕಾರ ಕ್ರಮಕೈಗೊಳ್ಳಲಿದೆ ಎಂದಿದ್ದಾರೆ.
Insult to Yakshagana artists Purushothama Bilimale Sunil Kumar outraged



