ಆಷಾಢಕ್ಕೂ ಮುನ್ನವೇ ಸಿಎಂ ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ ಫಿಕ್ಸ್! ಯಾರಿಗೆ ಸಿಗಲಿದೆ ಸಚಿವ ಸ್ಥಾನ ?

karnataka cabinet expansion :ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೇತೃತ್ವದ ರಾಜ್ಯ ಸರಕಾರ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಮುಂದಿನ ವಾರದಲ್ಲಿ ಸಂಪುಟಕ್ಕೆ ಹೊಸ ಸಚಿವರು ಸೇರ್ಪಡೆ ಆಗೋದು ಬಹುತೇಕ ಫಿಕ್ಸ್‌ ಆಗಿದೆ. ಜುಲೈ 14ರಿಂದ ಆಷಾಢ ಮಾಸ ಆರಂಭವಾಗಲಿದ್ದು, ಅದಕ್ಕೂ ಮೊದಲೇ ಸಂಪುಟ ರಚನೆ ಆಗೋದು ಖಚಿತ ಎನ್ನಲಾಗುತ್ತಿದೆ.

karnataka cabinet expansion : ಬೆಂಗಳೂರು : ಕರ್ನಾಟಕದಲ್ಲಿ ಡಿಕೆ ಶಿವಕುಮಾರ್‌ ನೇತೃತ್ವದ ಸರಕಾರ ರಚನೆಯಾಗಿ ತಿಂಗಳು ಕಳೆದಿದೆ. ಇದೇ ಹೊತ್ತಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ತಮ್ಮ ಸಾಧನೆಯ ಪಟ್ಟಿಯನ್ನು ಬಿಚ್ಚಿಟ್ಟಿದ್ದಾರೆ. ತಾವು ಮುಖ್ಯಮಂತ್ರಿಯಾಗಿ ಯಾವೆಲ್ಲಾ ಸಾಧನೆಯನ್ನು ಮಾಡಿದ್ದಾರೆ, ಯಾವ ಹೊಸ ಯೋಜನೆಗಳನ್ನು ಜಾರಿ ಮಾಡಲಾಗಿದೆ ಅನ್ನೋ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಇದೇ ಹೊತ್ತಲ್ಲೇ ಬಿಜೆಪಿ ನಾಯಕರು ಸಿಎಂ ಸಾಧನೆಯ ಪಟ್ಟಿಗೆ ವ್ಯಂಗ್ಯವಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಾ ವೈಫಲ್ಯ ಅನುಭವಿಸಿದೆ ಅನ್ನೋ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಮತ್ತೊಂದೆಡೆಯಲ್ಲಿ ಸಿಎಂ ಡಿಕೆಶಿ ನೇತೃತ್ವದ ರಾಜ್ಯ ಸರಕಾರ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಮುಂದಿನ ವಾರದಲ್ಲಿ ಸಂಪುಟಕ್ಕೆ ಹೊಸ ಸಚಿವರು ಸೇರ್ಪಡೆ ಆಗೋದು ಬಹುತೇಕ ಫಿಕ್ಸ್‌ ಆಗಿದೆ. ಜುಲೈ 14ರಿಂದ ಆಷಾಢ ಮಾಸ ಆರಂಭವಾಗಲಿದ್ದು, ಅದಕ್ಕೂ ಮೊದಲೇ ಸಂಪುಟ ರಚನೆ ಆಗೋದು ಖಚಿತ ಎನ್ನಲಾಗುತ್ತಿದೆ. ಅಷಾಢ ಮಾಸ ಒಂದು ತಿಂಗಳ ಕಾಲ ಇರಲಿದ್ದು, ಅಗಸ್ಟ್‌ 15ಕ್ಕೆ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆಗೋದು ಅನಿವಾರ್ಯ. ಈದೇ ಕಾರಣದಿಂದಲೇ ಆಷಾಢಕ್ಕೂ ಮೊದಲೇ ಪೂರ್ಣ ಪ್ರಮಾಣದಲ್ಲಿ ಸಂಪುಟ ರಚನೆ ಆಗಲಿದೆ.

ಅಗಸ್ಟ್‌ 5ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಿದೆ. ಜೊತೆಗೆ ಮಳೆಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಅಧಿವೇಶನಕ್ಕೂ ಮೊದಲೇ ಪೂರ್ಣ ಪ್ರಮಾಣದ ಸಂಪುಟ ರಚನೆ ಆಗಬೇಕಾಗಿದೆ. ಈ ಎಲ್ಲಾ ಕಾರಣಗಳಿಂದಲೇ ಸಿಎಂ ಡಿಕೆ ಶಿವಕುಮಾರ್‌ ಅವರು ಈಗಾಗಲೇ ಹೊಸ ಸಚಿವರ ಪಟ್ಟಿಯನ್ನು ಸಿದ್ದ ಪಡಿಸಿದ್ದು, ಹೈಕಮಾಂಡ್‌ ಒಪ್ಪಿಗೆಯನ್ನೂ ಪಡೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಬಾರಿ ಸಂಪುಟದಲ್ಲಿದ್ದ ಬಹುತೇಕ ಸಚಿವರಿಗೆ ಈ ಬಾರಿ ಕೋಕ್‌ ಸಿಗುವುದು ಖಚಿತ. ಯುವ ಸಚಿವರ ಪಡೆಯನ್ನು ಕಟ್ಟೋದಕ್ಕೆ ಡಿಕೆ ಶಿವಕುಮಾರ್‌ ಅವರು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಕಳೆದ ಬಾರಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಸಚಿವರ ಸ್ಥಾನ ಧಕ್ಕಿರಲಿಲ್ಲ, ಆದರೆ ಈ ಬಾರಿ ಈಗಾಗಲೇ ಯುಟಿ ಖಾದರ್‌ ಸಂಪುಟ ಸೇರ್ಪಡೆ ಆಗಿದ್ದು, ಮತ್ತೊಂಬ್ಬ ಕಾಂಗ್ರೆಸ್‌ ನಾಯಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆಯಿದೆ.

karnataka cabinet expansion dk shivakumar before ashadha

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »