Karnataka CM Change : ಸಿಎಂ ಸ್ಥಾನಕ್ಕಾಗಿ ಖರ್ಗೆ ಮುಂದೆ ಡಿಕೆ ಶಿವಕುಮಾರ್ ಹಕ್ಕೊತ್ತಾಯ..! ರೆಬೆಲ್ ಆಗ್ತಾರಾ ಟ್ರಬಲ್ ಶೂಟರ್

Karnataka CM Change : ಬೆಂಗಳೂರು : ನಾಯಕತ್ವ ಬದಲಾವಣೆಯ ನಡುವಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊಸ ದಾಳ ಉರುಳಿಸಿದ್ದಾರೆ. ದೆಹಲಿಯಲ್ಲಿ ಮೊಕ್ಕಾಂ ಹೂಡಿರುವ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ಹಕ್ಕೊತ್ತಾಯ ಮಾಡಿದ್ದಾರೆ.
ಕರ್ನಾಟಕದಲ್ಲಿ ನವೆಂಬರ್ ಕ್ರಾಂತಿ ನಡೆಯುತ್ತೆ. ಸಿದ್ದರಾಮಯ್ಯ ಸಿಎಂ ಹುದ್ದೆಗೆ ರಾಜೀನಾಮೆ ಕೊಡ್ತಾರೆ. ಡಿಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗ್ತಾರೆ ಅನ್ನುವ ಕುರಿತು ಚರ್ಚೆ ನಡೆಯುತ್ತಿದೆ.
ಆದರೆ ಬಿಹಾರ ಚುನಾವಣಾ ಫಲಿತಾಂಶದ ಬೆನ್ನಲ್ಲೇ ನಾಯಕತ್ವ ಬದಲಾವಣೆ ಕಷ್ಟ ಸಾಧ್ಯ ಅನ್ನೋ ಸುದ್ದಿಯೂ ಹರಿದಾಡುತ್ತಿದೆ. ಡಿಕೆ ಶಿವಕುಮಾರ್ ಕೂಡ ಸದ್ಯಕ್ಕೆ ಸಿಎಂ ಯೋಚನೆ ಕೈಬಿಟ್ಟಿದ್ದಾರೆಂದು ಮಾಧ್ಯಮಗಳು ವರದಿ ಮಾಡಿದ್ದವು.
ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಎದುರಲ್ಲಿ ಹಕ್ಕೊತ್ತಾಯ ಮಂಡನೆ ಮಾಡಿದ್ದಾರೆ. ತನಗೆ ಈ ಹಿಂದೆ ಕೊಟ್ಟ ಮಾತಿನಂತೆಯೇ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಸಬೇಕು.
ಇದನ್ನೂ ಓದಿ : ಕರ್ನಾಟಕದಲ್ಲಿ ಸಿಎಂ ಬದಲಾವಣೆ : ಅಹಿಂದ ಅಸ್ತ್ರಕ್ಕೆ ಶರಣಾಯ್ತು ಕಾಂಗ್ರೆಸ್
ಕರ್ನಾಟಕದ ಮುಖ್ಯಮಂತ್ರಿ ಆಗಲು ಅವಕಾಶ ಕಲ್ಪಿಸಬೇಕು. ನಾನು ಪಕ್ಷಕ್ಕಾಗಿ ಸಾಕಷ್ಟು ವರ್ಷಗಳ ಕಾಲ ದುಡಿದಿದ್ದೇನೆ. ಸಿಎಂ ಹುದ್ದೆ ನೀಡದೇ ಇದ್ದರೂ ಕೂಡ ತಾನು ಪಕ್ಷ ನಿಷ್ಟನಾಗಿಯೇ ಇರುತ್ತೇನೆ.
ಈ ಹಿಂದೆ ಎರಡೂವರೆ ವರ್ಷದ ಬಳಿಕ ಸಿಎಂ ಹುದ್ದೆ ನೀಡುವುದಾಗಿ ಭರವಸೆಯನ್ನು ಕೊಟ್ಟಿದ್ದೀರಿ. ಅದರಂತೆಯೇ ನೀವು ಕೊಟ್ಟ ಮಾತನ್ನು ಉಳಿಸಿಕೊಳ್ಳಿ. ನಾನು ತನ್ನ ಹಕ್ಕೊತ್ತಾಯವನ್ನು ಮಂಡನೆ ಮಾಡುತ್ತಿದ್ದೇನೆ ಎಂದಿದ್ದಾರೆ.
ಬಿಹಾರ ಚುನಾವಣೆಯ ಬೆನ್ನಲ್ಲೇ ತಮಿಳುನಾಡು, ಕೇರಳದಲ್ಲಿಯೂ ಚುನಾವಣೆ ಸಮೀಪಿಸುತ್ತಿದೆ. ಇಂತಹ ಹೊತ್ತಲ್ಲೇ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೇ ? ಬೇಡವೇ ಅನ್ನುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗೊಂದಲಕ್ಕೆ ಸಿಲುಕಿದೆ.
ಇದನ್ನೂ ಓದಿ : ಬಿಹಾರ ಚುನಾವಣಾ ಸೋಲು : ಕರ್ನಾಟಕದಲ್ಲಿ ನವೆಂಬರ್ ಕ್ರಾಂತಿಗೆ ತಿಲಾಂಜಲಿ
ಸದ್ಯ ನಾಯಕತ್ವದ ಕುರಿತು ಪಟ್ಟು ಹಿಡಿದಿರುವ ಡಿಕೆಶಿ ಒಂದೊಂದೇ ಅಸ್ತ್ರ ಪ್ರಯೋಗಿಸುತ್ತಲೇ ಇದ್ದಾರೆ. ಒಂದೊಮ್ಮೆ ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡದೇ ಇದ್ರೆ ಡಿಕೆ ಶಿವಕುಮಾರ್ ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೆ ಅನ್ನೋದನ್ನು ಕಾದುನೋಡಬೇಕಾಗಿದೆ.
Karnataka CM Change DK Shivakumar meet Mallikarjuna Kharge in Delhi



