ಕರ್ನಾಟಕಕ್ಕೆ ಡಿಕೆ ಶಿವಕುಮಾರ್‌ ಸಿಎಂ : ವೀರ ಗಂಗಾಧರ ಅಜ್ಜನ ಹೆಸರಲ್ಲಿ ಪ್ರಮಾಣ ವಚನ

ಉಪಮುಖ್ಯಮಂತ್ರಿಗಳಾಗಿ ಡಾ.ಜಿ.ಪರಮೇಶ್ವರ್‌ ಅವರು ಅಂಬೇಡ್ಕರ್‌ ಹೆಸರಿನಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್‌ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಅವರು ವೀರ ಗಂಗಾಧರ ಅಜ್ಜ ಅವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಡಿಕೆಶಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅಧಿಕಾರ ಸ್ವೀಕಾರ

ಉಪಮುಖ್ಯಮಂತ್ರಿಗಳಾಗಿ ಡಾ.ಜಿ.ಪರಮೇಶ್ವರ್‌ ಅವರು ಅಂಬೇಡ್ಕರ್‌ ಹೆಸರಿನಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ಡಾ.ಜಿ.ಪರಮೇಶ್ವರ್‌ ಅವರು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇದುವರೆಗೆ ಒಟ್ಟು 5 ಬಾರಿ ಪರಮೇಶ್ವರ್‌ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿ, ಸಮ್ಮಿಶ್ರ ಸರಕಾರದಲ್ಲಿ ಅವರು ಡಿಸಿಎಂ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರಾರು ?

ಇನ್ನು ಕ್ಯಾಬಿನೆಟ್‌ ದರ್ಜೆಯ ಸಚಿವರಾಗಿ ಹಿರಿಯ ಕಾಂಗ್ರೆಸ್‌ ಮುಖಂಡರಾದ ಕೆಎಚ್‌ ಮುನಿಯಪ್ಪ, ಎಂಬಿ ಪಾಟೀಲ್‌, ಕೆಜೆ ಜಾರ್ಜ್‌, ಸತೀಶ್‌ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಪ್ರಿಯಾಂಕ ಖರ್ಗೆ, ವಿಧಾನಸಭಾ ಸ್ಪೀಕರ್‌ ಆಗಿದ್ದ ಯುಟಿ ಖಾದರ್‌ ಅವರು ಸ್ಪೀಕರ್‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಈಶ್ವರ ಖಂಡ್ರೆ, ಬೈರತಿ ಸುರೇಶ್‌, ಡಾ.ಶರಣ ಪ್ರಕಾಶ್‌ ಪಾಟೀಲ್‌ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

Also Read : Karnataka New CM: ರಾಜ್ಯದ 24ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪಟ್ಟಾಭಿಷೇಕ; ಯಾರಿಗೆ ಎಷ್ಟು ದಿನ ಸಿಎಂ ಪಟ್ಟ ಸಿಕ್ಕಿತ್ತು?

ಪದಗ್ರಹಣ ಸಮಾರಂಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ ಉಸ್ತುವಾರಿಗಳಾದ ಕೆಸಿ ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲ, ಹಿರಿಯ ಕಾಂಗ್ರೆಸ್‌ ಮುಖಂಡ ಸುಶೀಲ್‌ಕುಮಾರ್‌ ಶಿಂಧೆಮ ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು, ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್‌ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

Also Read :  ದೊಡ್ಡಾಲಹಳ್ಳಿಯಿಂದ ಸಿಎಂ ಗಾದಿಯವರೆಗೆ ‘ಟ್ರಬಲ್ ಶೂಟರ್‌’ : ಡಿಕೆ ಶಿವಕುಮಾರ್ ರಾಜಕೀಯ ಜರ್ನಿಯ ಕಂಪ್ಲೀಟ್‌ ಡಿಟೇಲ್ಸ್‌

ಇನ್ನು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾಗದ ಸೋನಿಯಾ ಗಾಂಧಿ ಅವರು ಖುದ್ದು ಡಿಕೆ ಶಿವಕುಮಾರ್‌ ಅವರಿಗೆ ದೂರವಾಣಿ ಕರೆ ಮೂಲಕ ಶುಭ ಹಾರೈಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯಲ್ಲಿದ್ದು, ಡಿಕೆ ಶಿವಕುಮಾರ್‌ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದ್ದಾರೆ. ಆದಿಚುಂಚನ ಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೇರಿ ಹಲವು ಪಾಲ್ಗೊಂಡಿದ್ದರು.

Anil Gundmi | ಅನಿಲ್‌ ಗುಂಡ್ಮಿ

ಅನಿಲ್‌ ಗುಂಡ್ಮಿ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್‌ ನೆಕ್ಸ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ.

Related Stories