Karnataka CM Siddaramaiah : ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು 54 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೆ ‘ರಾಜ್ಯ ಸಚಿವ’ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ವಿಶೇಷವಾಗಿ, ಈ ಪಟ್ಟಿಯಲ್ಲಿ ಬಿಜೆಪಿ ಮುಖಂಡರೊಬ್ಬರ ಹೆಸರಿರುವುದು ಕಾಂಗ್ರೆಸ್ ಕಾರ್ಯಕರ್ತರ ತೀವ್ರ ಅಸಮಾಧಾನಕ್ಕೆ ಗುರಿಯಾಗಿದೆ.
Karnataka Cabinet : ವಿವಾದಕ್ಕೆ ಕೇಂದ್ರಬಿಂದು: ಬಿಜೆಪಿ ಮುಖಂಡ ಭೂಕಾಂತ್
ಈ ಬಾರಿಯ ಪಟ್ಟಿಯಲ್ಲಿ ಶಿಕಾರಿಪುರದ ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ ಅವರಿಗೆ ಸಚಿವ ಸ್ಥಾನಮಾನ ಸಿಕ್ಕಿರುವುದು ಅಚ್ಚರಿ ಮೂಡಿಸಿದೆ. ಭೂಕಾಂತ್ ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿಯ ಅಧ್ಯಕ್ಷರಾಗಿದ್ದಾರೆ. ಇವರ ಪತ್ನಿ ಕೂಡ ಬಿಜೆಪಿಯಿಂದ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದರು. ಪಕ್ಕಾ ಬಿಜೆಪಿ ಹಿನ್ನೆಲೆಯ ವ್ಯಕ್ತಿಗೆ ಕಾಂಗ್ರೆಸ್ ಸರ್ಕಾರವು ಉನ್ನತ ಗೌರವ ನೀಡಿದ್ದಕ್ಕೆ ‘ಕೈ’ ಕಾರ್ಯಕರ್ತರು ಕೆಂಡಾಮಂಡಲವಾಗಿದ್ದಾರೆ.
ಕಾರ್ಯಕರ್ತರ ಆಕ್ರೋಶಕ್ಕೆ ಕಾರಣಗಳೇನು?
ಪಕ್ಷನಿಷ್ಠೆಗೆ ಬೆಲೆಯಿಲ್ಲವೇ?: “ರಾತ್ರಿ ಹಗಲು ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಕಡೆಗಣಿಸಿ, ವಿರೋಧ ಪಕ್ಷದ ಮುಖಂಡರಿಗೆ ಸವಲತ್ತು ನೀಡುತ್ತಿರುವುದು ಸರಿಯಲ್ಲ” ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಯಕರ ವಿರುದ್ಧ ಅಸಮಾಧಾನ: ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಪಕ್ಷದ ಆಂತರಿಕ ವಲಯದಲ್ಲಿ ಟೀಕೆಗಳು ಕೇಳಿಬರುತ್ತಿವೆ.
ಧರ್ಮಸ್ಥಳದ ಭಕ್ತಾದಿಗಳ ಗಮನಕ್ಕೆ : ವಸತಿ ಗೃಹಗಳ ಬುಕ್ಕಿಂಗ್ ನೆಪದಲ್ಲಿ ಸೈಬರ್ ವಂಚನೆ, ಆಡಳಿತ ಮಂಡಳಿಯಿಂದ ಎಚ್ಚರಿಕೆ
Karnataka CM Siddaramaiah : ಸರ್ಕಾರದ ಆದೇಶದಲ್ಲೇನಿದೆ?
ಈ ಹಿಂದೆ ಕೇವಲ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗೆ ಮಾತ್ರ ಸಚಿವ ಸ್ಥಾನಮಾನ ನೀಡಲಾಗುತ್ತಿತ್ತು. ಆದರೆ, ಈಗ ಅದನ್ನು ವ್ಯಾಪಕಗೊಳಿಸಿರುವ ಸರ್ಕಾರ, ಒಟ್ಟು 54 ಮಂದಿ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸಚಿವರಿಗೆ ಸಿಗುವಂತ ಸೌಲಭ್ಯಗಳನ್ನು ನೀಡಲು ಮುಂದಾಗಿದೆ. ಇವರಿಗೆ ಅಗತ್ಯವಿರುವ ಶಿಷ್ಟಾಚಾರದ ಸೌಲಭ್ಯಗಳನ್ನು ಆಯಾ ಇಲಾಖೆಗಳೇ ಒದಗಿಸಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೂಚಿಸಿದೆ.


