Escom Privatisation : ಎಸ್ಕಾಂ ಖಾಸಗೀಕರಣ ಯತ್ನ ಜನವಿರೋಧಿ: ಸರಕಾರದ ವಿರುದ್ದ ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ

ಕರ್ನಾಟಕ ಸರಕಾರ ಕರ್ನಾಟಕ ರಾಜ್ಯದ ಎಸ್ಕಾಂಗಳನ್ನು (ವಿದ್ಯುತ್ ಸರಬರಾಜು ಕಂಪನಿಗಳು) ಖಾಸಗೀಕರಣ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಾಜಿ ಇಂಧನ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು/ಕಾರ್ಕಳ : ಕರ್ನಾಟಕ ಸರಕಾರ ಕರ್ನಾಟಕ ರಾಜ್ಯದ ಎಸ್ಕಾಂಗಳನ್ನು (ವಿದ್ಯುತ್ ಸರಬರಾಜು ಕಂಪನಿಗಳು) ಖಾಸಗೀಕರಣ (Escom Privatisation )ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಾಜಿ ಇಂಧನ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಸುನಿಲ್‌ ಕುಮಾರ್‌ ಅವರು ರಾಜ್ಯ ಸರಕಾರದ ಕ್ರಮವನ್ನು ಕಠಿಣ ಪದಗಳಲ್ಲಿ ಖಂಡಿಸಿದ್ದಾರೆ. ಕರ್ನಾಟಕದ ಎಸ್ಕಾಂಗಳನ್ನು ಖಾಸಗೀಕರಣ ಮಾಡುವ ಯತ್ನ ರಾಜ್ಯದ ಜನರ ಹಿತಕ್ಕೆ ಸಂಪೂರ್ಣ ವಿರುದ್ಧವಾಗಿದೆ. ವಿದ್ಯುತ್ ಎಂಬುದು ಕೇವಲ ವ್ಯವಹಾರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಹಕ್ಕು” ಎಂದು ಸುನಿಲ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಲಾಭದ ಆಸೆಯಿಂದಾಗಿ ಖಾಸಗಿ ಕಂಪೆನಿಗಳಿಗೆ ಎಸ್ಕಾಂಗಳನ್ನು ಹಸ್ತಾಂತರ ಮಾಡಿದ್ರೆ, ಭವಿಷ್ಯದಲ್ಲಿ ಜನರು ಬೆಲೆ ಏರಿಕೆಯ ಭಾರ ಹೆಚ್ಚುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

Also Read : ‘ವಿಮೆ’ ದುರಾಸೆಗೆ ಮತ್ತೊಂದು ಬಲಿ: ಮಗಳ ಕೃತ್ಯಕ್ಕೆ ಬೇಸತ್ತು ತಾಯಿ ಆತ್ಮಹತ್ಯೆ; ಒಂದೇ ಕುಟುಂಬದಲ್ಲಿ ಘನಘೋರ ದುರಂತ!

ರಾಜ್ಯ ಸರಕಾರ ಸಾರ್ವಜನಿಕ ವಲಯವನ್ನು ಬಲಪಡಿಸುವ ಬದಲು ಖಾಸಗೀಕರಣದ ಕಡೆ ವಾಲುತ್ತಿರುವುದು ರೈತರು, ಸಣ್ಣ ಉದ್ಯಮಿಗಳು ಹಾಗೂ ಮಧ್ಯಮ ವರ್ಗದ ಜನರ ಮೇಲೆ ಗಂಭೀರ ಪರಿಣಾಮ ಬೀರುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ.

ಜನರ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಎಸ್ಕಾಂಗಳ ಖಾಸಗೀಕರಣ ವನ್ನು ತಕ್ಷಣವೇ ನಿಲ್ಲಿಸಬೇಕು. ಆದರೆ ರಾಜ್ಯ ಸರ್ಕಾರ ಈ ವಿಚಾರದಲ್ಲಿ ತೋರುತ್ತಿರುವ ಉದ್ದಟತನ ಸಾರ್ವಜನಿಕ ಹಿತಕ್ಕೆ ಮಾರಕವಾಗಿದೆ. ಸಂಬಂಧಪಟ್ಟ ಸಂಘಟನೆಗಳು ಈ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಈ ಬಗ್ಗೆ ಸ್ಪಂದಿಸದೇ ಇರುವುದು ಅತ್ಯಂತ ವಿಷಾದನೀಯ ಎಂದಿದ್ದಾರೆ.

Also Read : ವಾಹನ ಸವಾರರೇ ಗಮನಿಸಿ… ಟ್ರಾಫಿಕ್ ದಂಡ ಪಾವತಿಸುವವರಿಗೆ ಬಂಪರ್ ಆಫರ್: ಇಂದಿನಿಂದಲೇ ಶೇ. 50 ರಿಯಾಯಿತಿ ಅನ್ವಯ!

ಕರ್ನಾಟಕ ರಾಜ್ಯ ಸರ್ಕಾರದ ಈ ಮೌನ ಮತ್ತು ಸ್ಪಂದಿಸದ ಧೋರಣೆಯು ಸಾರ್ವಜನಿಕ ಹಿತಾಸಕ್ತಿಗೆ ಮಾರಕವಾಗಿದ್ದು, ತಕ್ಷಣವೇ ಈ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

Karnataka escom privatisation Mla sunil kumar x post Kannada News

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories