ಸರ್ಕಾರಿ ಶಾಲಾ – ಕಾಲೇಜುಗಳ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಗುಡ್​ನ್ಯೂಸ್​..! ದ್ವಿತೀಯ ಪಿಯುಸಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಭಾಗ್ಯ

ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಜಾರಿಗೆ ತರಲು ಚಿಂತಿಸುತ್ತಿರುವ ರಾಜ್ಯ ಸರ್ಕಾರವು, ಶೀಘ್ರದಲ್ಲಿಯೇ 12ನೇ ತರಗತಿವರೆಗಿನ ಗಂಡು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಬಸ್​ ಪ್ರಯಾಣದ ಭಾಗ್ಯ ನೀಡಲಿದೆ.

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಕಲ್ಪಿಸಿರುವುದು ಗೊತ್ತಿರುವ ವಿಚಾರ. ಆದರೆ ಇದೀಗ ಉಚಿತ ಭಾಗ್ಯದಲ್ಲಿ ಇನ್ನೂ ಒಂದು ಹೆಜ್ಹೆ ಮುಂದಡಿ ಇಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ವರ್ಗಕ್ಕೆ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ (Bus Pass For Students) ವ್ಯಾಸಂಗ ಮಾಡುತ್ತಿರುವ ಗಂಡು ಮಕ್ಕಳನ್ನೂ ಸೇರಿಸಿಕೊಳ್ಳಲು ನಿರ್ಧರಿಸಿದೆ. ಹೌದು..! ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಜಾರಿಗೆ ತರಲು ಚಿಂತಿಸುತ್ತಿರುವ ರಾಜ್ಯ ಸರ್ಕಾರವು, ಶೀಘ್ರದಲ್ಲಿಯೇ 12ನೇ ತರಗತಿವರೆಗಿನ ಗಂಡು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಬಸ್​ ಪ್ರಯಾಣದ ಭಾಗ್ಯ ನೀಡಲಿದೆ.
ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಬೇಕು. ಹಾಗೂ ವಿದ್ಯಾರ್ಥಿಗಳು ಸುರಕ್ಷಿತವಾಗಿ ಹಾಗೂ ಸುಲಭವಾಗಿ ತಮ್ಮ ಶಿಕ್ಷಣ ಕೇಂದ್ರಗಳಿಗೆ ತೆರಳಲು ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲು ಚಿಂತನೆ ನಡೆಸಲಾಗುತ್ತಿದೆ. ಒಂದು ವೇಳೆ ಈ ಯೋಜನೆ ಜಾರಿಗೆ ಬಂದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಿಜಕ್ಕೂ ಅನುಕೂಲವಾಗಲಿದೆ.

ರಾಜ್ಯ ಸಾರಿಗೆ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿಯಾಗಿ ಚರ್ಚಿಸಿ ಈ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಈಗಾಗಲೇ ವಿದ್ಯಾರ್ಥಿನಿಯರು ಶಕ್ತಿ ಭಾಗ್ಯ ಯೋಜನೆಯ ಅಡಿಯಲ್ಲಿ ಉಚಿತ ಸಾರಿಗೆ ಪ್ರಯಾಣದ ಲಾಭವನ್ನು ಪಡೆಯುತ್ತಿದ್ದಾರೆ. ಈ ಸಾಲಿಗೆ ವಿದ್ಯಾರ್ಥಿಗಳನ್ನೂ ಸೇರ್ಪಡೆ ಮಾಡಿದರೆ ಶಿಕ್ಷಣ ಕಲಿಕೆಗೆ ದೂರದ ಊರಿಗೆ ಪ್ರಯಾಣ ಬೆಳೆಸುವ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಎಸ್​ಎಸ್​ಎಲ್‌ಸಿ ಮೌಲ್ಯಮಾಪಕರಿಗೆ ಗುಡ್​ನ್ಯೂಸ್​..! ಗೌರವ ಸಂಭಾವನೆ ಹೆಚ್ಚಿಸಿದ ರಾಜ್ಯ ಸರ್ಕಾರ

ಸದ್ಯ ಈ ಪ್ರಸ್ತಾವನೆಯು ಚರ್ಚಾ ಹಂತದಲ್ಲಿದೆ. ಹಣಕಾಸು ಇಲಾಖೆಯ ಅನುಮೋದನೆ ದೊರೆತ ಬಳಿಕ ಈ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದೆ. ಒಂದು ವೇಳೆ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ಬಂದಲ್ಲಿ, ಸಾರಿಗೆ ಇಲಾಖೆಗೆ ಕೊಂಚ ಹೊರೆಯಾದರೂ ಸಹ ಶಿಕ್ಷಣ ಇಲಾಖೆಗೆ ಲಾಭವಾಗಲಿದೆ. ರಾಜ್ಯ ಸರ್ಕಾರ ಈ ಯೋಜನೆಯನ್ನು ಪುರಸ್ಕರಿಸುತ್ತೋ ಅಥವಾ ತಿರಸ್ಕರಿಸುತ್ತೋ ಅನ್ನೋದನ್ನ ಕಾದು ನೋಡಬೇಕಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories