ರಾಜ್ಯ ಸರ್ಕಾರದ ಮಾಸ್ಟರ್ ಪ್ಲಾನ್; ಮಹಿಳೆಯರ ಉಚಿತ ಬಸ್ ಪ್ರಯಾಣದ ದುರುಪಯೋಗಕ್ಕೆ ಲಗಾಮು
Shakti Scheme Free Bus | Smart Card: ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಉಚಿತ ಬಸ್ ಪ್ರಯಾಣ ಮಾಡುತ್ತಿರುವ ಮಹಿಳೆಯರಿಗೆ ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದಾಗಿ ಇನ್ನು ಮುಂದೆ ಬಸ್‌ಗಳಲ್ಲಿ ಆಧಾರ್ ಕಾರ್ಡ್ ತೋರಿಸುವ ಕಿರಿಕಿರಿ ತಪ್ಪಲಿದೆ. ಇನ್ಮುಂದೆ ಬಸ್‌ಗಳಲ್ಲಿ ಆಧಾರ್ ಕಾರ್ಡ್ ತೋರಿಸುವ ಬದಲು, ‘ಶಕ್ತಿ ಸ್ಮಾರ್ಟ್ ಕಾರ್ಡ್’ ಕಡ್ಡಾಯವಾಗಲಿದೆ. ಈ ಕ್ರಮವು ಯೋಜನೆಯಲ್ಲಿ ನಡೆಯುತ್ತಿದ್ದ ಕೆಲವು ಅಕ್ರಮಗಳಿಗೆ ಬ್ರೇಕ್ ಹಾಕುವ ಮುನ್ಸೂಚನೆ ನೀಡಿದೆ.
ನಕಲಿ ದಾಖಲೆಗಳಿಗೆ ಬೀಳಲಿದೆ ಲಗಾಮು
ಪ್ರಸ್ತುತ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆಯುತ್ತಿದ್ದಾರೆ. ಆದರೆ, ಈ ವ್ಯವಸ್ಥೆಯಲ್ಲಿ ಅನ್ಯ ರಾಜ್ಯದವರು ಅಥವಾ ನಕಲಿ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣ ಮಾಡುವ ಮೂಲಕ ಸರ್ಕಾರದ ಹಣ ದುರುಪಯೋಗವಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು.
- ಹೊಸ ಸ್ಮಾರ್ಟ್ ಕಾರ್ಡ್‌ಗಳನ್ನು ಎಲೆಕ್ಟ್ರಾನಿಕ್ ಟಿಕೆಟಿಂಗ್ ಮಿಷನ್ (ETM) ಮೂಲಕ ಸ್ಕ್ಯಾನ್ ಮಾಡಲಾಗುತ್ತದೆ.
- ಇದರಿಂದ ನಕಲಿ ದಾಖಲೆಗಳಿಗೆ ಅವಕಾಶವಿರುವುದಿಲ್ಲ ಮತ್ತು ಯೋಜನೆಯ ಲಾಭ ಯಾರಿಗೆ ತಲುಪುತ್ತಿದೆ ಎಂಬ ನಿಖರ ಮಾಹಿತಿ ಸರ್ಕಾರಕ್ಕೆ ಸಿಗಲಿದೆ.
- ರಾಜ್ಯದ ನಿವಾಸಿಗಳು ಎಂಬ ದಾಖಲೆಯನ್ನು ಪರಿಶೀಲಿಸಿ ಸರ್ಕಾರವೇ ಈ ಕಾರ್ಡ್‌ಗಳನ್ನು ಉಚಿತವಾಗಿ ನೀಡಲಿದೆ.
ಆನ್ಲೈನ್ ಬೆಟ್ಟಿಂಗ್ ಗೀಳಿಗೆ ಗ್ರಾಹಕರ 4 ಕೋಟಿಯ ಚಿನ್ನ ಲೂಟಿ ಮಾಡಿದ ಬ್ಯಾಂಕ್ ಅಧಿಕಾರಿ!
ಬಸ್ ಮತ್ತು ಮೆಟ್ರೋ ಎರಡಕ್ಕೂ ಒಂದೇ ಕಾರ್ಡ್!
ಈ ಹೊಸ ಕಾರ್ಡ್ ಕೇವಲ ಬಸ್ ಪ್ರಯಾಣಕ್ಕೆ ಮಾತ್ರ ಸೀಮಿತವಾಗಿಲ್ಲ. ಇದನ್ನು ‘ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್’ (NCMC) ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ.
- BMTC ಬಸ್: ಮಹಿಳೆಯರು ಈ ಕಾರ್ಡ್ ಬಳಸಿ ಎಂದಿನಂತೆ ಉಚಿತವಾಗಿ ಪ್ರಯಾಣಿಸಬಹುದು.
- ನಮ್ಮ ಮೆಟ್ರೋ: ಇದೇ ಕಾರ್ಡ್ ಅನ್ನು ಮೆಟ್ರೋ ಪ್ರಯಾಣಕ್ಕೂ ಬಳಸಬಹುದು. ಆದರೆ, ಮೆಟ್ರೋದಲ್ಲಿ ಉಚಿತ ಪ್ರಯಾಣ ಇರುವುದಿಲ್ಲ; ಕಾರ್ಡ್‌ಗೆ ಹಣ ರೀಚಾರ್ಜ್ ಮಾಡಿಸಿ ಸ್ಲೈಡ್ ಮಾಡುವ ಮೂಲಕ ಮೆಟ್ರೋ ಸೇವೆ ಪಡೆಯಬಹುದು.
ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಇದೇ ವೇಳೆ ಕೆಎಸ್‌ಆರ್‌ಟಿಸಿ (KSRTC) ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ ಘೋಷಿಸಿದೆ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿರುವ ಪರೀಕ್ಷಾ ಅವಧಿಯಲ್ಲಿ, ಪರೀಕ್ಷಾರ್ಥಿಗಳು ತಮ್ಮ ‘ಹಾಲ್ ಟಿಕೆಟ್’ ತೋರಿಸಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.



