ಕಾರವಾರ : ಉಚಿತವಾಗಿ ಆಧಾರ್ ಅಪ್ಡೇಟ್ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮನವಿ

Free Aadhaar update : ಕಾರವಾರ : ಈಗಾಗಲೇ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಪಡೆದಿರುವ ಸಾರ್ವಜನಿಕರು ತಮ್ಮ ವಾಸಸ್ಥಳದ ಬದಲಾವಣೆಯಾಗಿದ್ದಲ್ಲಿ, ಪ್ರಸಕ್ತ ವಿಳಾಸದ ಬದಲಾವಣೆಯನ್ನು 14-6-2026 ರ ವರೆಗೆ ಆನ್ಲೈನ್ ನಲ್ಲಿ ಉಚಿತವಾಗಿ ಮಾಡಿಕೊಳ್ಳಲು ಅವಕಾಶವನ್ನು ನೀಡಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಆಧಾರ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಧಾರ್‌ ಕಾರ್ಡ್ 10 ವರ್ಷಗಳಿಂದ ವಿಳಾಸ ಬದಲಾವಣೆ ಮಾಡಿಕೊಳ್ಳದ ಸಾರ್ವಜನಿಕರು myAadhaar.uidai.gov.in ಮೂಲಕ 2026 ರ ಜೂನ್ 14 ರ ವರೆಗೆ ಪ್ರಸಕ್ತ ವಾಸಸ್ಥಳದ ಪುರಾವೆಯನ್ನು ಸಲ್ಲಿಸಿ, ಉಚಿತವಾಗಿ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

Karwar Free Aadhaar update Deputy Commissioner K. Lakshmi Priya appeals Kannada News

ಈಗಾಗಲೇ ಆಧಾರ್ ಕಾರ್ಡ್ ಪಡೆದಿರುವ 5 ವರ್ಷ ಮತ್ತು 15 ವರ್ಷ ಪೂರ್ಣಗೊಂಡಿರುವ ಮಕ್ಕಳ ಆಧಾರ್ ಅಪ್ಡೇಟ್ ಅನ್ನು ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಉಚಿತವಾಗಿ ಮಾಡಲಾಗುವುದು ಎಂದರು.‌ ಜಿಲ್ಲೆಯ ಎಲ್ಲಾ ಅಂಚೆ ಕಚೇರಿಗಳಲ್ಲಿ ಮತ್ತು ಬ್ಯಾಂಕ್ ಗಳಲ್ಲಿರುವ ಆಧಾರ್ ಸೇವಾ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ,

ಯಾವುದೇ ರೀತಿಯ ತಾಂತ್ರಿಕ ತೊಂದರೆಗಳಿದ್ದಲ್ಲಿ ಜಿಲ್ಲಾ ಆಧಾರ್ ಸಮಾಲೋಚಕರನ್ನು ಸಂಪರ್ಕಿಸಿ ಅವರ ನೆರವು ಪಡೆಯುವುದರ ಮೂಲಕ ಜಿಲ್ಲೆ ಸಾರ್ವಜನಿಕರಿಗೆ ಆಧಾರ್ ನೋಂದಣಿ, ತಿದ್ದುಪಡಿ ಸಂಬಂಧಿತ ಯಾವುದೇ ಸಮಸ್ಯೆಗಳಾಗದಂತೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಇದನ್ನೂ ಓದಿ : ಯಕ್ಷಗಾಲಕ್ಕೆ ಅಪಚಾರ, ಬಿಳಿಮಲೆ ವಜಾಮಾಡಿ : ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌

ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳ ಆಧಾರ್ ಅಪ್ ಡೇಟ್ ಮಾಡುವ ಕುರಿತಂತೆ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಶಿಬಿರ ಆಯೋಜಿಸುವಂತೆ ತಿಳಿಸಿದ ಅವರು ಎಂಡೋ ಸಲ್ಫಾನ್ ಪೀಡಿತರಿಗೆ ಮತ್ತು ಹಾಸಿಗೆ ಪೀಡಿತರಿಗೆ ಮನೆಗಳಿಗೆ ತೆರಳಿ ಆಧಾರ್ ಸೌಲಭ್ಯ ಒದಗಿಸಬೇಕು.

ಪ್ರಸ್ತುತ ಜಿಲ್ಲೆಯಲ್ಲಿ 16,65,285 ಆಧಾರ್ ಕಾರ್ಡ್ಗಳಿದ್ದು, ಇವುಗಳಲ್ಲಿ 15,68,157 ಕಾರ್ಡ್ಗಳು ಮೊಬೈಲ್ ಸೀಡ್ ಆಗಿದ್ದು ಬಾಕಿ ಇರುವ 97,128 ಆಧಾರ್ ಕಾರ್ಡ್ ಗಳ ಸೀಡಿಂಗ್ ಮಾಡುವ ಕುರಿತಂತೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

Karwar Free Aadhaar update Deputy Commissioner K. Lakshmi Priya appeals Kannada News

ಇದನ್ನೂ ಓದಿ : ಶಬರಿಮಲೆಯಲ್ಲಿ ಮಿತಿಮೀರಿದ ಜನಸಂದಣಿ, ಯಾತ್ರಾರ್ಥಿಗಳಲ್ಲಿ ಕಾಡಿದ ಕಾಲ್ತುಳಿತದ ಭಯ

ಜಿಲ್ಲೆಯಲ್ಲಿ ಯಾವುದೇ ಅನಧಿಕೃತ ಆಧಾರ್ ಕೇಂದ್ರಗಳು ಮತ್ತು ಆಧಾರ್ ತಿದ್ದುಪಡಿ ಮಾಡುವ ಕೇಂದ್ರಗಳು ಕಾರ್ಯನಿರ್ವಹಿಸದಂತೆ ಪೊಲೀಸ್ ಇಲಾಖೆ ವತಿಯಿಂದ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿ.ಪಂ. ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಬೆಂಗಳೂರಿನ ಆಧಾರ್ ಪ್ರಾದೇಶಿಕ ಕೇಂದ್ರದ ಮೆನೇಜರ್ ಮೊಹಮದ್ ಮುಸಾಬ್, ಜಿಲ್ಲಾ ಆಧಾರ್ ಸಮಾಲೋಚಕ ಮಹಾಬಲೇಶ್ವರ ದೇಸಾಯಿ ಹಾಗೂ ಲೀಡ್ ಬ್ಯಾಂಕ್ ಮತ್ತು ಅಂಚೆ ಕಚೇರಿಯ ಅಧಿಕಾರಿಗಳು ಹಾಜರಿದ್ದರು.

Karwar Free Aadhaar update Deputy Commissioner K. Lakshmi Priya appeals Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories