ಕರ್ನೂಲ್ ಬಸ್ ದುರಂತ ಉನ್ನತ ಮಟ್ಟ ತನಿಖೆ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : Kurnool bus tragedy: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ನಡೆದ ಬಸ್ ದುರಂತದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಂಧ್ರಪ್ರದೇಶ ಸರಕಾರಕ್ಕೆ ಹೇಳಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಡಿಕೆ ಶಿವಕುಮಾರ್‌, ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ, “ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ ಎಂದಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ ನಮ್ಮ ಪಕ್ಷದ ರಾಯಚೂರು ಅಧ್ಯಕ್ಷೆ ಚಾಲಕನನ್ನು ಎಚ್ಚರಿಸಿದ ಪರಿಣಾಮ, ಬಸ್ ನಲ್ಲಿದ್ದ 20 ಮೆಡಿಕಲ್ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದಿದ್ದಾರೆ.

ಕೆಲವು ಸಣ್ಣಪುಟ್ಟ ಗಾಯಗಳಾಗಿದ್ದವು. ಆದರೆ ಆ ರಾಜ್ಯದ ಪೊಲೀಸರು ಅಗತ್ಯ ಕ್ರಮ ಕೈಗೊಂಡಿರಲಿಲ್ಲ. ನಾನು ರಾಯಚೂರಿಗೆ ಹೋದಾಗ ಅಲ್ಲಿ ಕೆಲವರು ನನಗೆ ಅದರ ವಿಡಿಯೋ ತೋರಿಸಿದರು ಎಂದಿದ್ದಾರೆ.

Also Read: Hassan Accident: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರು : ನಾಲ್ವರಿಗೆ ಗಾಯ

ಈ ದುರಂತ ಬೇರೆ ರಾಜ್ಯದಲ್ಲಿ ಆಗಿದ್ದರೂ ಈ ಬಗ್ಗೆ ಗಮನಹರಿಸುವಂತೆ ಸಾರಿಗೆ ಸಚಿವರು ಹಾಗೂ ಗೃಹ ಸಚಿವರಿಗೆ ಸೂಚಿಸುತ್ತೇವೆ. ಯಾವುದೇ ರಾಜ್ಯ ಸರಕಾರ ಆಗಿದ್ದರೂ ಸರಿ, ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳ ಕುರಿತು ಗಮನ ಹರಿಸಬೇಕು ಎಂದಿದ್ದಾರೆ.

ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹೀಗಾಗಿ ಅಪಘಾತಕ್ಕೆ ಕಾರಣ ತಿಳಿಯಲು ತನಿಖೆ ನಡೆಸಬೇಕಿದೆ. ಇದು ಸಣ್ಣ ಘಟನೆಯಲ್ಲ. ಇಂತಹ ದುರ್ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿ ನಡೆಯುತ್ತಿರುವ ನಾಯಕತ್ವದ ವಿಚಾರದ ಕುರಿತು ಮಾತನಾಡಿದ ಅವರು, ಶಿಸ್ತು ನಮ್ಮ ಪಕ್ಷದ ಆದ್ಯತೆ. ಈ ವಿಚಾರವಾಗಿ ನಾನು ಈಗ ಮಾತನಾಡುವುದಿಲ್ಲ. ಯಾರ ಬಳಿ ಚರ್ಚೆ ಮಾಡಬೇಕೋ ಮಾತನಾಡುತ್ತೇನೆ” ಎಂದು ತಿಳಿಸಿದರು.

Also Read: Mysore Sandal Soap: ಮೈಸೂರು ಸ್ಯಾಂಡಲ್‌ ಸೋಪ್‌ ಭರ್ಜರಿ ಮಾರಾಟ : ಸರಕಾರಕ್ಕೆ 135 ಕೋಟಿ ರೂ ಡಿವಿಡೆಂಟ್‌

ಬೆಂಗಳೂರಿಗೆ ಸಂಸದನ ಕೊಡುಗೆ ಏನು?

ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ,‌ “ಲೋಕಸಭಾ ಸದಸ್ಯನಾಗಿ ಆತ ಕರ್ನಾಟಕಕ್ಕೆ ಎಷ್ಟು ಅನುದಾನ ತಂದಿದ್ದಾನೆ. ಎಷ್ಟು ಬಾರಿ ಪ್ರಧಾನಿಯವರನ್ನು ಭೇಟಿ ಮಾಡಿ ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಅನುದಾನ ಕೋರಿದ್ದಾರೆ. ನಿಗದಿತವಾಗಿ ದೊರೆಯುವ ಅನುದಾನ ಬೇರೆ. ಆದರೆ ವಿಶೇಷ ಅನುದಾನದ ಬಗ್ಗೆ ನಾನು ಪ್ರಶ್ನೆ ಮಾಡುತ್ತಿದ್ದೇನೆ. ಬೆಂಗಳೂರಿನ ಜನ ಆತನಿಗೆ ಮತ ನೀಡಿದ್ದಾರೆ. ಬೆಂಗಳೂರಿಗೆ ಆತನ ಕೊಡುಗೆ ಏನೆಂದು ಉತ್ತರಿಸಲಿ” ಎಂದರು.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories