ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಜನತೆಗೆ ತಂಪೆರೆಯಲು ಸಜ್ಜಾದ ವರುಣದೇವ
ಕರ್ನಾಟಕದಾದ್ಯಂತ ಮುಂದಿನ ಏಳು ದಿನಗಳ ಕಾಲ ಮಳೆರಾಯನ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ ಜನತೆಗೆ ವರುಣದೇವ ತಂಪೆರೆಯಲು ಮತ್ತೆ ಸಿದ್ಧನಾಗಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಾದ್ಯಂತ ಮುಂದಿನ ಏಳು ದಿನಗಳ ಕಾಲ ಮಳೆರಾಯನ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಬಾರಿ ಮಳೆಯ ಕೇಂದ್ರಬಿಂದು ದಕ್ಷಿಣ ಕರ್ನಾಟಕವಾಗಲಿದೆ. ವಿಶೇಷವಾಗಿ ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಬೆಂಗಳೂರು ನಗರ, ಮೈಸೂರು, ಮಂಡ್ಯ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ವರುಣನ ಅಬ್ಬರ ತುಸು ಹೆಚ್ಚೇ ಇರಲಿದ್ದು, ಜನಜೀವನದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆKarnatakaRain
ಕರಾವಳಿ ತೀರದ ಜಿಲ್ಲೆಗಳಾದ ಮಂಗಳೂರು ಮತ್ತು ಉಡುಪಿಯಲ್ಲಿ ಮೇ 12ರವರೆಗೆ ಮಳೆ ಸುರಿಯಲಿದ್ದರೆ, ಮಲೆನಾಡಿನ ಭಾಗಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಮಳೆಯ ಮುನ್ಸೂಚನೆ ಸಿಕ್ಕಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.



