ಗೋಕರ್ಣ: ಶಿವ ದರ್ಶನ ಪಡೆದ ಕೆಲವೇ ನಿಮಿಷಗಳಲ್ಲಿ ಭಕ್ತ ಸಾವು

Maha Shivaratri 2026 | Gokarna Shiva Temple: ಗೋವಾ ಮೂಲದ ರತ್ನಾಕರ (76) ಮೃತಪಟ್ಟ ದುರ್ದೈವಿ. ಶಿವರಾತ್ರಿಯ ವಿಶೇಷ ದಿನದಂದು ದೈವದರ್ಶನ ಪಡೆಯಲು ಅವರು ಗೋಕರ್ಣಕ್ಕೆ ಆಗಮಿಸಿದ್ದರು. ಆತ್ಮಲಿಂಗದ ದರ್ಶನ ಮುಗಿಸಿ ದೇವಸ್ಥಾನದಿಂದ ಹೊರಬರುತ್ತಿದ್ದಂತೆಯೇ ಅವರಿಗೆ ತೀವ್ರ ಹೃದಯಾಘಾತವಾಗಿದೆ.

Maha Shivaratri 2026 devotee died after lord shivas darshan in Gokarna temple

ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕ್ಷೇತ್ರ ಗೋಕರ್ಣದಲ್ಲಿ ಶಿವರಾತ್ರಿಯ ಸಂಭ್ರಮದ ನಡುವೆಯೇ ವಿಷಾದನೀಯ ಘಟನೆಯೊಂದು ಸಂಭವಿಸಿದೆ. ಮಹಾಬಲೇಶ್ವರನ ಆತ್ಮಲಿಂಗ ದರ್ಶನ ಪಡೆದ ಕೆಲವೇ ನಿಮಿಷಗಳಲ್ಲಿ ಭಕ್ತರೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಗೋವಾ ಮೂಲದ ರತ್ನಾಕರ (76) ಮೃತಪಟ್ಟ ದುರ್ದೈವಿ. ಶಿವರಾತ್ರಿಯ ವಿಶೇಷ ದಿನದಂದು ದೈವದರ್ಶನ ಪಡೆಯಲು ಅವರು ಗೋಕರ್ಣಕ್ಕೆ ಆಗಮಿಸಿದ್ದರು. ಆತ್ಮಲಿಂಗದ ದರ್ಶನ ಮುಗಿಸಿ ದೇವಸ್ಥಾನದಿಂದ ಹೊರಬರುತ್ತಿದ್ದಂತೆಯೇ ಅವರಿಗೆ ತೀವ್ರ ಹೃದಯಾಘಾತವಾಗಿದೆ.

ತಕ್ಷಣವೇ ಸ್ಥಳೀಯ ಪೊಲೀಸರು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಸಹ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಮೃತ ವ್ಯಕ್ತಿ ಈ ಹಿಂದೆ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ರಿಷಬ್ ಶೆಟ್ಟಿ ದಂಪತಿ: ದೇವಿಯ ರಥ ಎಳೆದ ಡಿವೈನ್‌ ಸ್ಟಾರ್

Scroll to Top