ಬ್ರಹ್ಮಾವರ ಪೊಲೀಸರ ವಶಕ್ಕೆ ಮಹೇಶ್ ಶೆಟ್ಟಿ ತಿಮರೋಡಿ

ಮಂಗಳೂರು : ಬಿಎಸ್ ಸಂತೋಷ್ (BL Santhosh) ಅವರ ವಿರುದ್ದ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi) ಯನ್ನು ಉಜಿರೆಯಲ್ಲಿ ಬ್ರಹ್ಮಾವರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಬಿಎಸ್ ಸಂತೋಷ್ ವಿರುದ್ದ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಠಾಣೆಯ ಪೊಲೀಸರು ನಿನ್ನೆಯೇ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ತೆರಳಿ ನೋಟಿಸ್ ನೀಡಿದ್ದರು. ಆದರೆ ತಿಮರೋಡಿ ವಿಚಾರಣೆಗೆ ಹಾಜರಾಗಿರಲಿಲ್ಲ.
ಇಂದು ಬೆಳಗ್ಗೆ ಉಡುಪಿ ಜಿಲ್ಲಾ ಎಎಸ್‌ಪಿ ಸುಧಾಕರ ನಾಯಕ್ ಅವರ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿದ್ದರು. ಈ ವೇಳೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ಮುಂದಾದ್ರು. ಈ ವೇಳೆಯಲ್ಲಿ ಉಡುಪಿ ಪೊಲೀಸರು ಹಾಗೂ ಮಹೇಶ್ ಶೆಟ್ಟಿ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ.
ಇದನ್ನೂ ಓದಿ : ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ : ಸರಕಾರಕ್ಕೆ ಸುನಿಲ್ ಕುಮಾರ್ ಮನವಿ
ನನ್ನ ಜೀವಕ್ಕೆ ಏನಾದ್ರೂ ಸರಕಾರವೇ ಹೊಣೆ : ತಿಮರೋಡಿ
ನಂತರ ತನ್ನದೇ ವಾಹನದಲ್ಲಿ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರ ಜೊತೆಗೆ ಬ್ರಹ್ಮಾವರ ಠಾಣೆಗೆ ತೆರಳಿದ್ದಾರೆ. ಈ ವೇಳೆಯಲ್ಲಿ ಮಾತನಾಡಿದ ತಿಮರೋಡಿ, ನನ್ನ ಜೀವಕ್ಕೆ ಏನಾದ್ರೂ ಆದ್ರೆ ರಾಜ್ಯ ಸರಕಾರವೇ ಕಾರಣ ಎಂದಿದ್ದಾರೆ.
ಧರ್ಮಸ್ಥಳ, ಸೌಜನ್ಯ ಪ್ರಕರಣವನ್ನು ಮುಚ್ಚಿ ಹಾಕಿಸುವ ಸಲುವಾಗಿ ಬಿಜೆಪಿ ನಾಯಕರನ್ನು ಹೀಗೆ ಮಾಡುತ್ತಿದ್ದಾರೆ ಎಂದು ತಿಮರೋಡಿ ಆರೋಪಿಸಿದ್ದಾರೆ.
ಸದ್ಯ ಮಹೇಶ್ ಶೆಟ್ಟಿ ತಿಮರೋಡಿ ಅವರು ತಮ್ಮದೇ ಕಾರಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯತ್ತ ತೆರಳಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರ ಜೊತೆಗೆ ಗಿರೀಶ್ ಮಟ್ಟಣ್ಣ ಕೂಡ ತೆರಳಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಕುರಿತು ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಿಜೆಪಿ ನಾಯಕರು ಸದನದಲ್ಲಿ ಆಗ್ರಹಿಸಿದ್ದರು. ಗೃಹ ಸಚಿವರು ಕೂಡ ಪೊಲೀಸರಿಗೆ ತಿಮರೋಡಿ ವಿರುದ್ದ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದರು.
ಇದನ್ನೂ ಓದಿ : ಮಹೇಶ್ ತಿಮರೋಡಿ ಅರೆಸ್ಟ್
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಲೇ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆಯಲ್ಲಿರುವ ನಿವಾಸಕ್ಕೆ ತೆರಳಿ, ವಶಕ್ಕೆ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ.



