Karnataka Legislative Assembly : ಬೆಂಗಳೂರು: ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಇಂದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಿತು. ವಿಶೇಷವಾಗಿ ನರೇಗಾ (MGNREGA) ಯೋಜನೆ ಮತ್ತು ಸರ್ಕಾರದ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಕುರಿತು ಬಿಜೆಪಿ ನಾಯಕ ಸುನಿಲ್ ಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಜಟಾಪಟಿ ಉಂಟಾಯಿತು.
ಅಷ್ಟಕ್ಕೂ ಸದನದಲ್ಲಿ ನಡೆದಿದ್ದೇನು ?
ಬಿಸಿನೆಸ್ ಅಡ್ವೈಸರಿ ಕಮಿಟಿ ಚರ್ಚೆ: ಸದನದಲ್ಲಿ ಅಜೆಂಡಾ ಪ್ರಕಾರ ಚರ್ಚೆ ನಡೆಯುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಬಿಸಿನೆಸ್ ಅಡ್ವೈಸರಿ ಕಮಿಟಿಯಲ್ಲಿ (BAC) ನರೇಗಾ ಬಗ್ಗೆ ಚರ್ಚಿಸಲು ಎರಡು ದಿನ ಮೀಸಲಿಡಲಾಗಿತ್ತು, ಆದರೆ ಮಧ್ಯದಲ್ಲಿ ಭ್ರಷ್ಟಾಚಾರದ ವಿಷಯಗಳು ಪ್ರಸ್ತಾಪವಾದಾಗ ಗದ್ದಲ ಆರಂಭವಾಯಿತು
ಭ್ರಷ್ಟಾಚಾರದ ಆರೋಪ: ಮಾಜಿ ಸಚಿವ ಸುನಿಲ್ ಕುಮಾರ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ‘ಲೂಟಿ’ ಹೊಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ನರೇಗಾ ಬಗ್ಗೆ ಚರ್ಚೆ ಮಾಡುವುದಕ್ಕೆ ನಾವು ಸಿದ್ದರಿದ್ದೇವೆ. ಆದರೆ ರಾಜ್ಯದ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡುವುದಕ್ಕೆ ಸಿದ್ದವಿಲ್ಲ ಎಂದರು.
ಸುನಿಲ್ ಕುಮಾರ್ ಅವರ ಹೇಳಿಕೆಗೆ ಪ್ರತಿಯಾಗಿ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರು, “ದಾಖಲೆಗಳಿದ್ದರೆ ನೀಡಿ, ಕೇವಲ ಪತ್ರಿಕಾ ವರದಿಗಳನ್ನು ನೋಡಿ ಮಾತನಾಡಬೇಡಿ ಎಂದರು.
Also Read : ಜ್ಯೋತಿಷಿ ಕಮಲಾಕರ್ ಭಟ್ ಜೊತೆ 5 ತಿಂಗಳಿಂದ ನನ್ನ ಪತ್ನಿಯ ಅಕ್ರಮ ಸಂಬಂಧ; ಸಿದ್ದಾಪುರದ ಮಹೇಶ್ ನಾಯ್ಕ್ ಹೇಳಿದ್ದಿಷ್ಟು
ದಾಖಲೆಗಳ ಪ್ರಸ್ತಾಪ: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಾವು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಪೆನ್ ಡ್ರೈವ್ ಮತ್ತು ಸ್ವೈಚ್ಛೆ ಹೇಳಿಕೆಗಳನ್ನು ದಾಖಲೆಯಾಗಿ ನೀಡಿದ್ದೇನೆ ಎಂದು ಸಮರ್ಥಿಸಿಕೊಂಡರು .
ಸದನದಲ್ಲಿ ಗದ್ದಲ: ಆಡಳಿತ ಪಕ್ಷದ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ದಿನೇಶ್ ಗುಂಡೂರಾವ್ ಅವರು ವಿರೋಧ ಪಕ್ಷದವರು ಕೇವಲ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ನರೇಗಾ ವಿಷಯದ ಬಗ್ಗೆ ಗಂಭೀರ ಚರ್ಚೆ ನಡೆಯಬೇಕೆಂದು ಸ್ಪೀಕರ್ ಮನವಿ ಮಾಡಿದರೂ, ಉಭಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪದಿಂದ ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು .
Also read : ಸಾಗರ ಮಾರಿಕಾಂಬೆ ಜಾತ್ರೆಯಲ್ಲಿ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸದನವು ಇಂದು ರಾಜಕೀಯ ಕೆಸರೆರಚಾಟಕ್ಕೆ ಸಾಕ್ಷಿಯಾಯಿತು, ಸರ್ಕಾರವು ಭ್ರಷ್ಟಾಚಾರದ ಬಗ್ಗೆ ಚರ್ಚಿಸಲು ಸಿದ್ಧರಿಲ್ಲ ಎಂದು ಬಿಜೆಪಿ ಆರೋಪಿಸಿದರೆ, ಬಿಜೆಪಿ ಕೇವಲ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಕಾಂಗ್ರೆಸ್ ಪ್ರತಿಪಾದಿಸಿತು.
MGNREGA Karnataka Legislative Assembly Big fight between Sunil Kumar and Siddaramaiah in the House


