ಮಂಗಳೂರು: ತಮ್ಮ ಅಪ್ರಾಪ್ತ ಪುತ್ರನಿಗೆ ದ್ವಿಚಕ್ರ ವಾಹನ ಓಡಿಸಲು ಅವಕಾಶ ಮಾಡಿಕೊಟ್ಟ ತಾಯಿಗೆ ಕೋರ್ಟ್ನಲ್ಲಿ 26 ಸಾವಿರ ರೂಪಾಯಿ ದಂಡ ವಿಧಿಸಿದ ಘಟನೆಯು ಮಂಗಳೂರಿನಲ್ಲಿ ಸಂಭವಿಸಿದೆ. ಮಂಗಳೂರಿನ 4ನೇ ಜೆಎಂಎಫ್ಸಿ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.
ಹತಿಜಮ್ಮ ಮಾಲೀಕತ್ವದ KA19 HR4112 ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಅವರ ಪುತ್ರ ಬೈಕಂಪಾಡಿಯಲ್ಲಿ ಸಂಚಾರ ನಡೆಸಿದ್ದ. ಪುತ್ರ ಅಪ್ರಾಪ್ತನಾಗಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಮಂಗಳೂರಿನ 4ನೇ ಜೆಎಂಎಫ್ಸಿ ನ್ಯಾಯಾಲಯವು ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಬಳಸು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಹತಿಜಮ್ಮರಿಗೆ 26 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದರೂ ಸಹ ಕ್ಯಾರೇ ಎನ್ನದ ಪೋಷಕರು ತಮ್ಮ ಅಪ್ರಾಪ್ತ ಬಾಲಕರಿಗೆ ವಾಹನ ಚಲಾವಣೆಗೆ ಅವಕಾಶ ನೀಡುತ್ತಿರುವುದು ನಿಜಕ್ಕೂ ದುರಂತ.
ಈ ರೀತಿಯ ಘಟನೆಗಳ ಬಳಿಕವಾದರೂ ಪೋಷಕರು ಎಚ್ಚೆತ್ತುಕೊಂಡು ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡುವ ಪರಿಪಾಠ ತಪ್ಪಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: ಶ್ವಾನಪ್ರಿಯರೇ ಗಮನಿಸಿ… ನಾಯಿಗಳಿಗೆ ಆಹಾರ ಹಾಕೋಕೆ ಬೇಕು ಲೈಸೆನ್ಸ್
