ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ : ಕರ್ನಾಟಕದಲ್ಲಿ ಇಂದಿನಿಂದ ವ್ಯಾಪಕ ಮಳೆ ಮುನ್ಸೂಚನೆ
ಕೇರಳಕ್ಕೆ ಅಧಿಕೃತವಾಗಿ ಪ್ರವೇಶಿಸಿರುವ ಮುಂಗಾರು ಮಾರುತಗಳು ಕರ್ನಾಟಕದ ಕರಾವಳಿ ತೀರಕ್ಕೆ ಅಪ್ಪಳಿಸಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ತೀವ್ರತೆ ಹೆಚ್ಚಲಿದದೆ. ಹವಾಮಾನ ಇಲಾಖೆಯು ಮುಂಬರುವ ದಿನಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ, ಕರಾವಳಿಯ ಅವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕೇರಳದಿಂದ ಮುಂಗಾರು ಪ್ರವೇಶದಿಂದಾಗಿ ರಾಜ್ಯದಲ್ಲಿ ಮಳೆಯ ಚಟುವಟಿಕೆ ಚುರುಕುಗೊಳ್ಳಲಿದ್ದು, ಇಂದಿನಿಂದ ಜೂನ್ 10ರವರೆಗೆ ರಾಜ್ಯಾದ್ಯಂತ ಮಳೆಯ ವಾತಾವರಣವೇ ಇರಲಿದೆ ಎಂದು ಐಎಂಡಿ ತಿಳಿಸಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗಲಿದ್ದು, ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಲು ಮತ್ತು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಲು ಸಾರ್ವಜನಿಕರಿಗೆ ಕೋರಲಾಗಿದೆ.
Also Read: ವಾಹನ ಸವಾರರಿಗೆ ಮತ್ತೊಮ್ಮೆ ಗುಡ್ನ್ಯೂಸ್ : ರಾಜ್ಯದಲ್ಲಿ ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ 50 ವಿನಾಯಿತಿ
ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ನದಿ ಹಾಗೂ ಜಲಾಶಯಗಳಿಗೆ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ. ಇತ್ತ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಜೂನ್ 10ರವರೆಗೆ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
Monsoon officially enters Kerala widespread rain forecast in Karnataka from today