ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ : ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಹೈ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ತನ್ನ ರೌದ್ರಾವತಾರವನ್ನು ಮುಂದುವರಿಸಿದೆ. ಹವಾಮಾನದಲ್ಲಿ ಉಂಟಾಗಿರುವ ದಿಢೀರ್ ಬದಲಾವಣೆಯಿಂದಾಗಿ ಮುಂಬರುವ ದಿನಗಳಲ್ಲಿ ಕರಾವಳಿ ಮತ್ತು ಒಳನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ತನ್ನ ರೌದ್ರಾವತಾರವನ್ನು ಮುಂದುವರಿಸಿದೆ. ಹವಾಮಾನದಲ್ಲಿ ಉಂಟಾಗಿರುವ ದಿಢೀರ್ ಬದಲಾವಣೆಯಿಂದಾಗಿ ಮುಂಬರುವ ದಿನಗಳಲ್ಲಿ ಕರಾವಳಿ ಮತ್ತು ಒಳನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಇತ್ತೀಚಿನ ವರದಿಗಳ ಪ್ರಕಾರ ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಅತ್ಯಧಿಕ ಮಳೆ ದಾಖಲಾಗಿದೆ.

ರಾಜ್ಯದ ಜನತೆಗೆ ಸದ್ಯ ಹವಾಮಾನವು ಅಚ್ಚರಿ ಮೂಡಿಸುತ್ತಿದೆ. ಮುಂಜಾನೆ ವೇಳೆ ಎಂದಿನಂತೆ ಬಿಸಿಲಿನ ವಾತಾವರಣ ಕಂಡುಬಂದರೂ, ಮಧ್ಯಾಹ್ನವಾಗುತ್ತಿದ್ದಂತೆ ಆಕಾಶ ಕವಿದು, ಸಂಜೆಯ ಹೊತ್ತಿಗೆ ಸಿಡಿಲು-ಮಿಂಚಿನೊಂದಿಗೆ ಭಾರಿ ಮಳೆ ಸುರಿಯುತ್ತಿದೆ. ಗಂಟೆಗೆ ಬರೋಬ್ಬರಿ 60 ಕಿಲೋಮೀಟರ್ ವೇಗದಲ್ಲಿ ಬೀಸಲಿರುವ ಬಲವಾದ ಗಾಳಿಯು ಮರಗಳನ್ನು ಉರುಳಿಸುವ ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಆತಂಕ ಮೂಡಿಸಿದೆ. ಈ ಹಠಾತ್ ಮಳೆಯಿಂದಾಗಿ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

Also Read: ಭಟ್ಕಳದಲ್ಲಿ ಉದ್ವಿಗ್ನ ಪರಿಸ್ಥಿತಿ : ಮೂರು ದಿನ ಮದ್ಯದಂಗಡಿ ಬಂದ್‌ಗೆ ಆದೇಶ

ಹವಾಮಾನದ ವೈಪರೀತ್ಯವನ್ನು ಗಮನದಲ್ಲಿಟ್ಟುಕೊಂಡು ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು ಸಾರ್ವಜನಿಕರ ರಕ್ಷಣೆಗಾಗಿ ಕೆಲವು ಪ್ರಮುಖ ಸಲಹೆಗಳನ್ನು ನೀಡಿದೆ. ಅವುಗಳು ಯಾವುದು ಎಂಬುದನ್ನು ನೋಡುವುದಾದರೆ, ಗುಡುಗು ಮತ್ತು ಸಿಡಿಲು ಇರುವ ಸಮಯದಲ್ಲಿ ಅನಗತ್ಯವಾಗಿ ಹೊರಗಡೆ ತಿರುಗಾಡುವುದನ್ನು ನಿಲ್ಲಿಸಬೇಕು.

ಬಲವಾದ ಗಾಳಿ ಬೀಸುವುದರಿಂದ ವಿದ್ಯುತ್ ಕಂಬ ಹಾಗೂ ದೊಡ್ಡ ಮರಗಳ ಕೆಳಗೆ ವಾಹನಗಳನ್ನು ನಿಲ್ಲಿಸುವುದಾಗಲಿ ಅಥವಾ ಅಲ್ಲಿ ಆಸರೆ ಪಡೆಯುವುದಾಗಲಿ ಮಾಡಕೂಡದು. ಮಳೆಯಿಂದಾಗಿ ರಸ್ತೆಗಳು ಜಾರುವುದರಿಂದ ಮತ್ತು ಗೋಚರತೆ ಕಡಿಮೆ ಇರುವುದರಿಂದ ವಾಹನ ಸವಾರರು ನಿಧಾನವಾಗಿ ಚಲಿಸುವಂತೆ ಸೂಚನೆ ನೀಡಿದೆ.

Monsoon rains in the state High alert for many districts including Bangalore

 

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories