ಭಟ್ಕಳದಲ್ಲಿ ಉದ್ವಿಗ್ನ ಪರಿಸ್ಥಿತಿ : ಮೂರು ದಿನ ಮದ್ಯದಂಗಡಿ ಬಂದ್‌ಗೆ ಆದೇಶ
ಹಿಂದೂ ಮುಸ್ಲಿಮರ ನಡುವೆ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಮೂರಿನಕಟ್ಟೆ ವಿವಾದ ಪ್ರಕರಣದ ಬಳಿಕ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸದ್ಯ ಮೇಲ್ನೋಟಕ್ಕೆ ಎಲ್ಲವೂ ಹತೋಟಿಗೆ ಬಂದಂತೆ ಕಂಡರೂ ಹಿಂಸಾಚಾರ ನಡೆಯಬಲ್ಲ ಸಾಧ್ಯತೆಗಳು ದಟ್ಟವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.
ಹಿಂದೂ ಮುಸ್ಲಿಮರ ನಡುವೆ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಮೂರಿನಕಟ್ಟೆ ವಿವಾದ ಪ್ರಕರಣದ ಬಳಿಕ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸದ್ಯ ಮೇಲ್ನೋಟಕ್ಕೆ ಎಲ್ಲವೂ ಹತೋಟಿಗೆ ಬಂದಂತೆ ಕಂಡರೂ ಹಿಂಸಾಚಾರ ನಡೆಯಬಲ್ಲ ಸಾಧ್ಯತೆಗಳು ದಟ್ಟವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ. ಈ ಎಲ್ಲದರ ನಡುವೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಭಟ್ಕಳ ಶಹರ ಹಾಗೂ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮೂರು ದಿನಗಳ ಕಾಲ ಮದ್ಯದಂಗಡಿಗಳನ್ನು ಬಂದ್ ಮಾಡಿಸಿ ಆದೇಶ ಹೊರಡಿಸಿದ್ದಾರೆ .
ಕೋಮು ಸಂಘರ್ಷ ಯಾವಾಗ ಬೇಕಿದ್ದರೂ ಸ್ಪೋಟಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಈ ನಿರ್ಧಾರವನ್ನು ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲಾಗಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡದಂತೆ ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಸಂದರ್ಭದಲ್ಲಿ ದೇವರ ಹೊರೆ ಇಡುವ ಮೂರಿನಕಟ್ಟೆಯನ್ನು ತೆರವು ಮಾಡಲಾಗಿತ್ತು. ಎಷ್ಟೇ ಮನವಿ ಸಲ್ಲಿಸಿದರೂ ಪರ್ಯಾಯ ಮೂರಿನಕಟ್ಟೆ ನಿರ್ಮಾಣ ಮಾಡಿಕೊಡದ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಂಡ ಬಳಿಕ ಅದೇ ಸ್ಥಳದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮೂರಿನಕಟ್ಟೆ ನಿರ್ಮಾಣ ಮಾಡಿದ್ದರು.
Also Read: ನಕಲಿ ಫಲಾನುಭವಿಗಳ ಪತ್ತೆಗೆ ಸರ್ಕಾರದ ಮಹತ್ವದ ಕ್ರಮ : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆ ಪರಿಷ್ಕರಣೆ
ಸಾರ್ವಜನಿಕ ಸ್ಥಳವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಕ್ಯಾತೆ ತೆಗೆದ ಮುಸ್ಲಿಂ ಸಮುದಾಯದವರು ಮೂರಿನಕಟ್ಟೆಯನ್ನು ಹೊಡೆದುರುಳಿಸುವ ಮೂಲಕ ಪರಿಸ್ಥಿತಿ ವಿಕೋಪಕ್ಕೆ ತಿರುಗುವಂತೆ ಮಾಡಿದ್ದರು. ಇದಾದ ಬಳಿಕ ಲಾಠಿಚಾರ್ಜ್ ನಡೆಸಿದ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದರು.
Murinakatte communal clash case – Liquor shops closed for three days in Bhatkal – Khaki eagle eyes everywhere



