ಸರ್ಕಾರಿ ಕಚೇರಿಗಳಲ್ಲಿ ಹೊಸ ರೂಲ್ಸ್.. ಒಂದೇ ಆಫೀಸಿನಲ್ಲಿ ಒಂದೇ ಜಾತಿಯವರಿಗೆ ಇಲ್ಲ ಚಾನ್ಸ್..!

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವಿಲ್ಲದೆ ನಡೆಯಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವಿಲ್ಲದೆ ನಡೆಯಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಪ್ರಮುಖ ಅಧಿಕಾರಿಗಳ ಅಧಿಕೃತ ದೂರವಾಣಿ ಸಂಖ್ಯೆಗಳನ್ನು ಕಡ್ಡಾಯವಾಗಿ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಈ ನಿರ್ಧಾರದಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗಾಗಿ ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಲು ಸಹಕಾರಿಯಾಗಲಿದೆ.

ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ಸ್ಪಷ್ಟನೆ

ಇದರೊಂದಿಗೆ, ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ತಾರತಮ್ಯ ಅಥವಾ ಪ್ರಭಾವಕ್ಕೆ ಆಸ್ಪದ ನೀಡಬಾರದು ಎಂಬ ಉದ್ದೇಶದಿಂದ ಡಿಸಿಎಂ ಮತ್ತೊಂದು ಪ್ರಮುಖ ಸೂಚನೆ ನೀಡಿದ್ದಾರೆ. ಒಂದೇ ಸರ್ಕಾರಿ ಕಚೇರಿಯಲ್ಲಿ ಅಥವಾ ನಿರ್ದಿಷ್ಟ ವಿಭಾಗದಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಅಧಿಕಾರಿಗಳು ಒಟ್ಟಿಗೆ ಇರದಂತೆ ನೋಡಿಕೊಳ್ಳಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಚೇರಿಗಳಲ್ಲಿ ಜಾತಿ ರಾಜಕಾರಣಕ್ಕೆ ಬ್ರೇಕ್ ಹಾಕಲು ಮತ್ತು ಎಲ್ಲ ವರ್ಗದ ಜನರಿಗೂ ಸಮಾನವಾಗಿ ನ್ಯಾಯ ಸಿಗುವಂತೆ ಮಾಡಲು ಈ ಕ್ರಮ ಅನಿವಾರ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಾರ್ವಜನಿಕರ ದೂರುಗಳನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಲು ಅಧಿಕಾರಿಗಳು ಇನ್ಮುಂದೆ ನಿರಂತರವಾಗಿ ‘ಜನಸಂಪರ್ಕ ಸಭೆ’ಗಳನ್ನು ಆಯೋಜಿಸಬೇಕು. ಸಣ್ಣಪುಟ್ಟ ಕೆಲಸಗಳಿಗೂ ಜನರು ಬೆಂಗಳೂರಿನ ವಿಕಾಸಸೌಧ ಅಥವಾ ವಿಧಾನಸೌಧಕ್ಕೆ ಅಲೆಯುವುದನ್ನು ತಪ್ಪಿಸಬೇಕು. ಜನಸಾಮಾನ್ಯರ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಒದಗಿಸುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯವಾಗಿದೆ. ಈ ನಿಯಮಗಳನ್ನು ಉಲ್ಲಂಘಿಸುವ ಅಥವಾ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Exit mobile version