ಶರಾವತಿ ಪಂಪ್ಡ್​ ಸ್ಟೋರೇಜ್​ಗೆ ಒಪ್ಪಿಗೆ ಇಲ್ಲ : ಜೀವ ವೈವಿಧ್ಯತೆಯ ರಕ್ಷಣೆಯೇ ನಮ್ಮ ಆದ್ಯತೆ ಎಂದ ಕೇಂದ್ರ

ವಿವಾದದ ಕೇಂದ್ರ ಬಿಂದುವಾಗಿದ್ದ ಶರಾವತಿ ಪಂಪ್ಡ್​ ಸ್ಟೋರೇಜ್​ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್​ ಸ್ಪಷ್ಟನೆ ನೀಡಿದ್ದಾರೆ. ಇದು ಮಲೆನಾಡು ಹಾಗೂ ಕರಾವಳಿ ಭಾಗದ ಜನತೆಗೆ ಬಿಗ್​ ರಿಲೀಫ್​ ನೀಡಿದೆ.

ಶರಾವತಿ, ಕಾವೇರಿ, ಬೇಡ್ತಿ, ಅಘನಾಶಿನಿ, ಕಾಳಿ ಕಣಿವೆಗಳ ಅರಣ್ಯ, ಜೀವವೈವಿಧ್ಯ ಅತಿ ಅಮೂಲ್ಯ. ಹೀಗಾಗಿ ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ವನ್ಯಜೀವಿ ಮಂಡಳಿಯಿಂದ ಒಪ್ಪಿಗೆ ನೀಡಿಲ್ಲ ಎಂದು ಕೇಂದ್ರ ಸಚಿವರು ಮಾಹಿತಿ ರವಾನಿಸಿದ್ದಾರೆ ಎಂದು ವೃಕ್ಷಲಕ್ಷ ಆಂದೋಲನ ಹಾಗೂ ಪಶ್ಚಿಮಘಟ್ಟ ಉಳಿಸಿ ಆಂದೋಲನ ನಿಯೋಗ ಹೇಳಿದೆ.

ಇದನ್ನೂ ಓದಿ: ಫೆಬ್ರವರಿ 12ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ವೃಕ್ಷಲಕ್ಷ ಆಂದೋಲನ, ಬೇಡ್ತಿ ಸಮಿತಿ ಮತ್ತು ಪಶ್ಚಿಮ ಘಟ್ಟ ಉಳಿಸಿ ಆಂದೋಲನದ ನಿಯೋಗ ಫೆ.9 ಮತ್ತು 10 ರಂದು ದೆಹಲಿಗೆ ತೆರಳಿ ಅರಣ್ಯ ಮತ್ತು ಪರಿಸರ ಸಚಿವಾಲಯದ ಮಂತ್ರಿಗಳು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿತ್ತು. ಈ ಸಂದರ್ಭದಲ್ಲಿ ಈ ಮಾಹಿತಿ ಹೊರಬಿದ್ದಿದೆ ಎನ್ನಲಾಗಿದೆ.
ಶರಾವತಿ, ಕಾವೇರಿ, ಬೇಡ್ತಿ, ಅಘನಾಶಿನಿ, ಕಾಳಿ ಕಣಿವೆಗಳ ಅರಣ್ಯ, ಜೀವವೈವಿಧ್ಯ ಅತಿ ಅಮೂಲ್ಯ. ಹೀಗಾಗಿ ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ವನ್ಯಜೀವಿ ಮಂಡಳಿಯಿಂದ ಒಪ್ಪಿಗೆ ನೀಡಿಲ್ಲ ಹಾಗೂ ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಅರಣ್ಯ ಪ್ರಸ್ತಾವನೆ ನಮ್ಮ ಬಳಿಗೆ ಬಂದಿಲ್ಲ ಎಂದು ಭೂಪೇಂದ್ರ ಯಾದವ್​ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories