RSS Ban : ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಬ್ಬಂದಿ ಅಮಾನತು : ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು: RSS Ban: ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿರುವ ಕೆಲವು ಸಿಬ್ಬಂದಿಗಳು ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ವರದಿಯನ್ಮು ಕೇಳಿದ್ದು, ಅಂಥವರನ್ನು ಅಮಾನತು ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸರಕಾರಿ ನೌಕರರು ಸರಕಾರದ ಕೆಲಸ ಮಾಡುತ್ತಾರೆ ಅಂದುಕೊಂಡಿದ್ದೇವೆ. ಆದರೆ, ಅವರು ನಮಗಿಂತ ರಾಜಕೀಯದಲ್ಲಿಯೇ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ. ಸರ್ಕಾರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಷಣ ಮಾಡುವುದು, ಬೇರೆ ರೀತಿಯಲ್ಲಿ ಪಾಲ್ಗೊಂಡಿದ್ದಾರೆ. ಎಂದಿದ್ದಾರೆ.

ಇದರಲ್ಲಿ ಕೆಲವರು ನಮ್ಮ ಇಲಾಖೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಸಂಬಂಧ ವರದಿ ತರಿಸಿಕೊಳ್ಳುತ್ತಿದ್ದೇನೆ. ಅಂಥವರ ಬಗ್ಗೆ ಕ್ರಮ ತೆಗದುಕೊಳ್ಳುತ್ತೇವೆ. ಅಂತಹ ಸಿಬ್ಬಂದಿಗಳನ್ನು ಅಮಾನತು ಮಾಡಲಾಗುವುದು. ಸರಕಾರಿ ಸಿಬ್ಬಂದಿಗಳು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ. ಅದರ ವಿರುದ್ಧ ಕ್ರಮ ವಹಿಸಲಾಗುತ್ತದೆ ಎಂದರು.‌

Also Read: ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಶವವಾಗಿ ಪತ್ತೆ : ಗಣತಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ನಾನು ಯಾವತ್ತೂ ಒಂದು ಸಂಸ್ಥೆ ಅಂತ ಹೇಳಿಲ್ಲ.‌ ಇಂತಹ ಯಾವುದೇ ಸಂಸ್ಥೆ ಇರಲಿ, 2013 ರಲ್ಲಿ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಸರಕಾರಿ ಶಾಲೆಗಳಲ್ಲಿ ಖಾಸಗಿ ಕಾರ್ಯಕ್ರಮ ನಡೆಸಬಾರದು ಎಂಬ ಸೊತ್ತೋಲೆ ಹೊರಡಿಸಿದ್ದರು. ಹಲವು ಇಲಾಖೆಗಳು ಈ ಹಿಂದೆ ಈ ನಿಟ್ಟಿನಲ್ಲಿ ಆರ್ಡರ್ ಮಾಡಿವೆ. ಹಾಗಾಗಿ ಅವರು ಆರ್ ಎಸ್ಎಸ್ ವಿರೋಧಿಗಳಾ ? ಎಂದು ಪ್ರಶ್ನಿಸಿದ್ದಾರೆ.

ಇವತ್ತು ಹಲವು ಲೋಪಗಳಿವೆ. ಅದಕ್ಕೆ ಇವರೆಲ್ಲರೂ ಬೆಳೆದಿದ್ದಾರೆ. ಸರ್ದಾರ್ ಪಟೇಲ್, ಇಂದಿರಾ ಗಾಂಧಿ ಆರ್ ಎಸ್ ಎಸ್ ಬ್ಯಾನ್ ಮಾಡಲು ಸಾಧ್ಯವಾಗಿಲ್ಲ ಅಂತಾರೆ.‌ ಹೌದು ಆವತ್ತು ನಿಷೇಧ ವಾಪಸ್ ಪಡೆದಿದ್ದು ಸರಿಯಲ್ಲ ಅಂತ ಹೇಳ್ತೇವೆ ಎಂದರು.‌

ಹಿಂದುತ್ವ ಯಾರು ತಂದಿದ್ದು?. ಸಾರ್ವಕರ್ ತಾನೇ ಹಿಂದುತ್ವ ತಂದಿದ್ದು. ಮೊದಲು ಎಲ್ಲರೂ ಹಿಂದೂ ಅಂತಾನೇ ಇತ್ತು. ಇವರ ರಾಜಕೀಯ ಬೇಳೆ ಬೇಯಿಸಿಕೊಳ್ಳೋಕೆ ತಂದಿದ್ದು. ಸಿದ್ದರಾಮಯ್ಯ ಸಾಹೇಬ್ರು ನಂಬದಿರಬಹುದು‌. ಡಿಸಿಎಂ ಸಾಹೇಬ್ರು ಬಹಳ ನಂಬ್ತಾರೆ‌. ಕೆಲವು ವಿಚಾರಗಳಲ್ಲಿ ನಾನು ನಂಬಲ್ಲ. ನಮ್ಮ ತಾಯಿ ನಂಬ್ತಾರೆ. ನನ್ನ ನಂಬಿಕೆ ಬೇರೆಯವರಿಗೆ ತೊಂದರೆ ಕೊಡಬಾರದು. ಸಂವಿಧಾನದ ಆಶಯಗಳಿಗೆ ಧಕ್ಕೆ ಬರಬಾರದು ಎಂದು ತಿಳಿಸಿದರು.

Also Read: RSS Ban: ಸರಕಾರಿ ಶಾಲೆಗಳಿಂದ ಸಾರ್ವಜನಿಕರನ್ನು ದೂರ ಮಾಡುವ ಹುನ್ನಾರ : ಸುನಿಲ್ ಕುಮಾರ್

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories