ಆರ್ಎಸ್ಎಸ್ಗೆ ಪ್ರಿಯಾಂಕ್ ಖರ್ಗೆ ಅಪ್ಪನ ಅನುಮತಿ ಬೇಕಿಲ್ಲ : ಸಿ.ಟಿ ರವಿ ಕಿಡಿ
CT Ravi: ರಾಜ್ಯಾದ್ಯಂತ ಸರ್ಕಾರಿ ಸ್ವಾಮ್ಯದ ಆಸ್ತಿಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಲು ಸರ್ಕಾರಕ್ಕೆ ಪತ್ರ ಬರೆದಿರುವ ಗ್ರಾಮೀಣಾಭಿವೃದ್ಧಿ, ಪಂಚಾಯತ ರಾಜ್ ಮತ್ತು ಐಟಿಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಕಿಡಿಕಾರಿದ್ದಾರೆ .
ಆರ್ಎಸ್ಎಸ್ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸಲು ಸಂವಿಧಾನಾತ್ಮಕವಾಗಿ ಅವಕಾಶವನ್ನು , ಅರ್ಹತೆಯನ್ನು ಹೊಂದಿದೆ. ಆರ್ಎಸ್ ಎಸ್ ಸಂಘಟನೆ ತನ್ನ ಕಾರ್ಯಚಟುವಟಿಕೆಯನ್ನು ನಡೆಸಲು ಅವರಪ್ಪನ ಅನುಮತಿ ನಮಗೆ ಬೇಕಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದರು. ಈ ಪತ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ ಯುವ ಸಮುದಾಯಗಳ ಮನಸ್ಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬುತ್ತಿದೆ.
Also Read: ಆರ್ಎಸ್ಎಸ್ಗೆ ನಿಷೇಧ ಹೇರಲು ಎಂದಿಗೂ ಸಾಧ್ಯವಿಲ್ಲ : ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ತಿರುಗೇಟು
ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪುದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ .
ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳಲ್ಲಿ ಸಂಘದ ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಮುಖೇನ ಸಿಎಂ ಸಿದ್ದರಾಮಯ್ಯ ಬಳಿಯಲ್ಲಿ ಮನವಿ ಮಾಡಿದ್ದರು.
ಈ ಮನವಿ ಪತ್ರದ ಮೇಲೆ ಸಿಎಂ ಸಿದ್ಧರಾಮಯ್ಯ , ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಬರೆದಿದ್ದು ಬಿಜೆಪಿಗರ ಹಾಗೂ ಹಿಂದೂ ಸಂಘಟನೆಗಳ ಕಣ್ಣು ಕೆಂಪಗಾಗಿಸಿದೆ.
Also Read: ನವೆಂಬರ್ ಕ್ರಾಂತಿ ನಡೆಯುತ್ತಾ ? ಸಿಎಂ ಡಿನ್ನರ್ ಮೀಟಿಂಗ್ ರಹಸ್ಯವೇನು ?



