Kagodu Thimmappa | Sagar Marikamba Jatra: ಸಾಗರ: ಮಲೆನಾಡಿನ ಪ್ರಖ್ಯಾತ ಸಾಗರ ಮಾರಿಕಾಂಬಾ ಜಾತ್ರೆಯ ಉದ್ಘಾಟನಾ ದಿನದಂದೇ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರು ದಿಢೀರ್ ಅಸ್ವಸ್ಥಗೊಂಡ ಘಟನೆ ನಡೆದಿದೆ.
ಇಂದಿನಿಂದ ಆರಂಭವಾಗಿರುವ ಸಾಗರ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಯ ದರ್ಶನ ಪಡೆಯಲು ಕಾಗೋಡು ತಿಮ್ಮಪ್ಪ ಅವರು ಆಗಮಿಸಿದ್ದರು. ಈ ವೇಳೆ ದೇವಸ್ಥಾನದಲ್ಲಿ ಭಕ್ತಾದಿಗಳ ಭಾರೀ ಜನಸಂದಣಿ ಇದ್ದ ಕಾರಣ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಅವರು ದೇವಸ್ಥಾನದ ಆವರಣದಲ್ಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಸಾಗರದ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರಾದ ವಿಕ್ರಂ ನೇತೃತ್ವದಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗಿದೆ. ಪ್ರಾಥಮಿಕ ಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಆರೋಗ್ಯ ಸುಧಾರಿಸಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಖ್ಯಾತ ಟಿವಿ ಜ್ಯೋತಿಷಿ ಕಮಲಾಕರ್ ಭಟ್ ಬಂಧನ; ಅಕ್ರಮ ಸಂಬಂಧದ ದೂರು ನೀಡಿದ್ದಕ್ಕೆ ಕೊಲೆ ಸಂಚು ಮಾಡಿದ್ರಾ ಗುರೂಜಿ?
ತಮ್ಮ ನೆಚ್ಚಿನ ನಾಯಕ ಅಸ್ವಸ್ಥರಾದ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದರು. ಆದರೆ ಈಗ ಅವರು ಗುಣಮುಖರಾಗಿರುವುದು ಎಲ್ಲರಿಗೂ ನಿರಾಳ ತಂದಿದೆ.

