ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆಗೆ ಸ್ಮಾರ್ಟ್‌ಕಾರ್ಡ್‌ ಕಡ್ಡಾಯ : ಅರ್ಜಿ ಸಲ್ಲಿಸುವುದು ಹೇಗೆ?

Shakti Scheme Smart Card Update 2026: ಕರ್ನಾಟಕ ಸರಕಾರ ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಕರ್ನಾಟಕ ರಾಜ್ಯದಾದ್ಯಂತ ಉತ್ತಮ ರೆಸ್ಪಾನ್ಸ್‌ ವ್ಯಕ್ತವಾಗಿದೆ. ಆದರೆ ಈ ಯೋಜನೆಯ ದುರುಪಯೋಗ ತಡೆಗೆ ಕರ್ನಾಟಕ ಸರಕಾರ ಸ್ಮಾರ್ಟ್‌ ಕಾರ್ಡ್‌ ಕಡ್ಡಾಯಗೊಳಿಸಿದೆ.

Shakti Scheme Smart Card Update 2026: ಕರ್ನಾಟಕ ಸರಕಾರ ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಕರ್ನಾಟಕ ರಾಜ್ಯದಾದ್ಯಂತ ಉತ್ತಮ ರೆಸ್ಪಾನ್ಸ್‌ ವ್ಯಕ್ತವಾಗಿದೆ. ಆದರೆ ಈ ಯೋಜನೆಯ ದುರುಪಯೋಗ ತಡೆಗೆ ಕರ್ನಾಟಕ ಸರಕಾರ ಸ್ಮಾರ್ಟ್‌ ಕಾರ್ಡ್‌ ಕಡ್ಡಾಯಗೊಳಿಸಿದೆ. ಹಾಗಾದ್ರೆ ಸ್ಮಾರ್ಟ್‌ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ ? ಸ್ಮಾರ್ಟ್‌ ಕಾರ್ಡ್‌ ಇಲ್ಲದೇ ಬಸ್‌ ಪ್ರಯಾಣ ಸಾಧ್ಯವಿಲ್ಲವೇ ಅನ್ನೋ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ.

ಶಕ್ತಿ ಯೋಜನೆಯನ್ನು ಸಾಕಷ್ಟು ಮಂದಿ ದುರುಪಯೋಗ ಪಡಿಸಿಕೊಳ್ತಿದ್ದಾರೆ ಅನ್ನೋ ಸಾಕಷ್ಟು ದೂರುಗಳು ಕೇಳಿಬರ್ತಿವೆ. ಇದೇ ಕಾರಣದಿಂದಲೇ “ಶಕ್ತಿ ಸ್ಮಾರ್ಟ್ ಕಾರ್ಡ್” (Shakti Smart Card) ಕಡ್ಡಾಯಗೊಳಿಸಲು ಸಾರಿಗೆ ಇಲಾಖೆ ಸಂಪೂರ್ಣ ಸಿದ್ಧತೆ ನಡೆಸಿದೆ. ಇನ್ಮುಂದೆ ಆಧಾರ್‌ ಕಾರ್ಡ್‌ ತೋರಿಸಿದರೆ ಉಚಿತ ಬಸ್‌ ಪ್ರಯಾಣ ಸಿಗೋದಿಲ್ಲ. ಬದಲಾಗಿ ಮುಂಬರುವ ದಿನಗಳಲ್ಲಿ ಸ್ಮಾರ್ಟ್‌ ಕಾರ್ಡ್‌ ಕಡ್ಡಾಯವಾಗಲಿದ್ದು, ಸ್ಮಾರ್ಟ್‌ ಕಾರ್ಡ್‌ ಹೊಂದಿಲ್ಲದವರು ಕಡ್ಡಾಯವಾಗಿ ಹಣಕೊಟ್ಟು ಟಿಕೆಟ್‌ ಖರೀದಿಸಬೇಕಾಗುತ್ತದೆ.

ಶಕ್ತಿ ಸ್ಮಾರ್ಟ್ ಕಾರ್ಡ್ (Shakti Smart Card) ಪಡೆಯುವುದು ಹೇಗೆ ? ಇದಕ್ಕೆ ಯಾವೆಲ್ಲಾ ದಾಖಲೆಗಳು ಬೇಕು ? ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಶಕ್ತಿ ಸ್ಮಾರ್ಟ್ ಕಾರ್ಡ್‌ : ಆಧಾರ್ ಕಾರ್ಡ್ ನಿಯಮ ಬದಲಾವಣೆ ಏಕೆ ?

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಜಾರಿಗೆ ಬರುತ್ತಿದ್ದಂತೆಯೇ ಶಕ್ತಿ ಯೋಜನೆ ಜಾರಿಗೆ ಬಂದಿತ್ತು. ಅಲ್ಲದೇ ಆರಂಭದಲ್ಲಿಯೇ ಶಕ್ತಿ ಯೋಜನೆಯ ಸ್ಮಾರ್ಟ್‌ ಕಾರ್ಡ್‌ ವಿತರಣೆ ಬಗ್ಗೆಯೂ ಚಿಂತನೆ ನಡೆದಿತ್ತು. ಆದರೆ ಕಳೆದ ಮೂರು ವರ್ಷಗಳಲ್ಲಿಯೂ ಶಕ್ತಿ ಯೋಜನೆಯ ಸ್ಮಾರ್ಟ್‌ ಕಾರ್ಡ್‌ ವಿತರಣೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಯೋಜನೆ ಜಾರಿಗೆ ಬಂದ ಆರಂಭದಲ್ಲಿ ಸ್ಮಾರ್ಟ್‌ಕಾರ್ಡ್‌ ನೀಡುವವರೆಗೆ ಸರಕಾರದ ಭಾವಚಿತ್ರ ಇರುವ ಗುರುತಿನ ಕಾರ್ಡ್‌ ಕಡ್ಡಾಯಗೊಳಿಸಲಾಗಿತ್ತು.

ಹೀಗಾಗಿ ಮಹಿಳೆಯರು ಸರಕಾರಿ ಬಸ್ಸುಗಳಲ್ಲಿ ಆಧಾರ್ ತೋರಿಸಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಆದರೆ, ನಿರ್ವಾಹಕರಿಗೆ (Conductors) ಗಡಿಬಿಡಿಯಲ್ಲಿ ನಕಲಿ ಆಧಾರ್ ಹಾಗೂ ಇತರ ರಾಜ್ಯಗಳ ಗುರುತಿನ ಚೀಟಿಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ. ಅಷ್ಟೇ ಅಲ್ಲದೇ ಸಾರಿಗೆ ಸಂಸ್ಥೆಗಳಿಗೆ (KSRTC, BMTC, NWKRTC, KKRTC) ನಷ್ಟದ ಪ್ರಮಾಣ ಹೆಚ್ಚಾಗುತ್ತಿರುವುದರಿಂದ, ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸಿ ಪಾರದರ್ಶಕತೆ ತರಲು ಸ್ಮಾರ್ಟ್ ಕಾರ್ಡ್ ಜಾರಿ ಕಡ್ಡಾಯ ಮಾಡಲಾಗುತ್ತಿದೆ.

ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಅರ್ಜಿಗೆ ಬೇಕಾಗುವ ಪ್ರಮುಖ ದಾಖಲೆಗಳು (Documents Needed)

ಶಕ್ತಿ ಸ್ಮಾರ್ಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮಹಿಳಾ ಫಲಾನುಭವಿಗಳು ಈ ಕೆಳಗಿನ ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು:

ಶಕ್ತಿ ಸ್ಮಾರ್ಟ್ ಕಾರ್ಡ್‌ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ಸರಕಾರ ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಮಹಿಳೆಯರಿಗೆ ವಿತರಣೆ ಮಾಡುವ ಹಾಗೂ ಸ್ಮಾರ್ಟ್‌ಕಾರ್ಡ್‌ಗೆ ಅರ್ಜಿ ಸಲ್ಲಿಸುವ ವಿಧಾನವನ್ನು ಅತ್ಯಂತ ಸರಳಗೊಳಿಸಿದೆ. ಅರ್ಹ ಮಹಿಳೆಯರು ಸೇವಾ ಸಿಂಧು ಪೋರ್ಟಲ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು:

ಶಕ್ತಿ ಸ್ಮಾರ್ಟ್ ಕಾರ್ಡ್‌ಗೆ ಆಫ್‌ಲೈನ್‌ನಲ್ಲಿ ಎಲ್ಲಿ ಅರ್ಜಿ ಸಲ್ಲಿಸಬಹುದು ?

ಇಂಟರ್ನೆಟ್ ಸೌಲಭ್ಯ ಇಲ್ಲದ ಗ್ರಾಮೀಣ ಭಾಗದ ಮಹಿಳೆಯರು ಆತಂಕ ಪಡುವ ಅಗತ್ಯವಿಲ್ಲ. ನಿಮ್ಮ ಹತ್ತಿರದ ಗ್ರಾಮ ಒನ್ (Gram One), ಕರ್ನಾಟಕ ಒನ್ (Karnataka One), ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅತ್ಯಲ್ಪ ಶುಲ್ಕ ಪಾವತಿಸಿ ಸ್ಮಾರ್ಟ್ ಕಾರ್ಡ್‌ಗಾಗಿ ಸುಲಭವಾಗಿ ನೋಂದಣಿ ಮಾಡಿಸಿಕೊಳ್ಳಬಹುದು.

ಮಹಿಳೆಯರ ಗಮನಕ್ಕೆ : ಶಕ್ತಿ ಸ್ಮಾರ್ಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವ ನೆಪದಲ್ಲಿ ಸಾರ್ವಜನಿಕರನ್ನು ವಂಚಿಸಲು ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಲಿಂಕ್‌ಗಳು ಹರಿದಾಡುತ್ತಿವೆ. ಯಾವುದೇ ಅನಧಿಕೃತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಅಥವಾ ಬ್ಯಾಂಕ್ ವಿವರಗಳನ್ನು ಹಂಚಿಕೊಳ್ಳಬೇಡಿ. ಕೇವಲ ಅಧಿಕೃತ ಸೇವಾ ಸಿಂಧು ಪೋರ್ಟಲ್ ಮಾತ್ರ ಬಳಸಿ.

shakti scheme smart card apply online seva sindhu portal

Exit mobile version