ಶಕ್ತಿ ಯೋಜನೆಯಿಂದಾಗಿ ಮುಜರಾಯಿ ಇಲಾಖೆಯ ಆದಾಯಕ್ಕೆ ಇಂಬು : ಪ್ರಮುಖ ದೇವಸ್ಥಾನಗಳಿಗೆ ಬಸ್ ಸಂಪರ್ಕವೂ ಹೆಚ್ಚಳ
ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಶಕ್ತಿ ಯೋಜನೆಯು ಮುಜರಾಯಿ ಇಲಾಖೆ ಅಧೀನದಲ್ಲಿರುವ ಪ್ರಮುಖ ದೇವಸ್ಥಾನಗಳ ಆದಾಯಕ್ಕೆ ಇಂಬು ನೀಡಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣದ ಲಾಭ ಪಡೆಯುತ್ತಿರುವ ಮಹಿಳೆಯರು ದೇಗುಲಗಳಿಗೆ ಹೆಚ್ಚೆಚ್ಚು ಆಗಮಿಸುತ್ತಿದ್ದು, ಇದರಿಂದ ದೇಗುಲಗಳ ಆದಾಯ ದುಪ್ಪಟ್ಟಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಬನಶಂಕರಿ ದೇವಸ್ಥಾನ ಹಾಗೂ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿನ ಕಾಣಿಕೆ ಸಂಗ್ರಹದಲ್ಲಿ ಏರಿಕೆಯಾಗಿದೆ. 2025-26ನೇ ಸಾಲಿನಲ್ಲಿ ಈ ದೇವಸ್ಥಾನಗಳ ಒಟ್ಟು ಆದಾಯ 613.5 ಕೋಟಿಯಿಂದ 666.2 ಕೋಟಿಗೆ ಏರಿಕೆಯಾಗಿ, ಶೇಕಡಾ 8.6ರಷ್ಟು ಹೆಚ್ಚಳ ಕಂಡಿದೆ. ಮಹಿಳಾ ಭಕ್ತಾದಿಗಳು ಈ ದೇವಸ್ಥಾನಗಳಿಗೆ ಹೆಚ್ಚಾಗಿ ಆಗಮಿಸುತ್ತಿದ್ದು, ದೇಗುಲಗಳ ಆದಾಯದ ಪ್ರಮುಖ ಕೊಂಡಿಗಳಾಗಿ ಬದಲಾಗಿದ್ದಾರೆ.
ಇನ್ನು ಈ ವಿಚಾರವಾಗಿ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಕೂಡ ಮಾತನಾಡಿದ್ದು, ಫ್ರೀ ಬಸ್ ಸೌಕರ್ಯ ಒದಗಿಸಿದ ಬಳಿಕ ಮಹಿಳೆಯರು ನಿರಾಂತಕವಾಗಿ ಪ್ರಯಾಣಿಸುತ್ತಿದ್ದಾರೆ. ದೇವಸ್ಥಾನಗಳಿಗೆ ತೆರಳುವ ಸಂದರ್ಭದಲ್ಲಿ ತಮ್ಮ ಜೊತೆಯಲ್ಲಿ ಕುಟುಂಬದವರನ್ನೂ ಕರೆದುಕೊಂಡು ಹೋಗುತ್ತಿದ್ದಾರೆ. ಇದರಿಂದ ಪ್ರಮುಖ ದೇವಸ್ಥಾನಗಳ ಆದಾಯ ಹೆಚ್ಚಿದ್ದು, ಸರ್ಕಾರದ ಖಜಾನೆ ಕೂಡ ತುಂಬುತ್ತಿದೆ. ಶಕ್ತಿ ಯೋಜನೆಯಿಂದ ಮುಜರಾಯಿ ಇಲಾಖೆ ಲಾಭದಲ್ಲಿದೆ ಎಂದಿದ್ದಾರೆ.
ಇನ್ನು ಹಬ್ಬದ ಸಂದರ್ಭಗಳಲ್ಲಿ, ಬೇಸಿಗೆ ರಜೆಯ ವೇಳೆ ರಾಜ್ಯದ ಪ್ರಮುಖ ದೇವಸ್ಥಾನಗಳಿಗೆ ಹೋಗುವ ಬಸ್ಗಳ ಸಂಖ್ಯೆಯನ್ನೂ ಹೆಚ್ಚಿಸಿದ್ದೇವೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ. ಇದರಿಂದಾಗಿ ದೇವಸ್ಥಾನಗಳಿಗೆ ತೆರಳುವ ಭಕ್ತಾದಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ನೋಡುತ್ತಿದ್ದೇವೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Shakti Yojana boosts Muzrai Departments revenue Bus connectivity to major temples also increased