ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ? ವರುಣಾ ಕ್ಷೇತ್ರದಲ್ಲಿ ಮತ್ತೆ ಕಣಕ್ಕೆ

Siddaramaiah resign : ಬೆಂಗಳೂರು: ರಾಜ್ಯದಲ್ಲಿ ನವೆಂಬರ್​ ಕ್ರಾಂತಿಯ ಕೂಗು ಜೋರಾಗಿ ಕೇಳಿ ಬರುತ್ತಿದೆ. ಕಾಂಗ್ರೆಸ್​ ಸರ್ಕಾರ ಈ ತಿಂಗಳಾಂತ್ಯಕ್ಕೆ ತನ್ನ ಎರಡೂವರೆ ವರ್ಷದ ಅವಧಿ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಬಹುದು ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.

ಇತ್ತ ಡಿಸಿಎಂ ಡಿ.ಕೆ ಶಿವಕುಮಾರ್​ ಕೂಡ ಸಿಎಂ ಸ್ಥಾನಕ್ಕೇರಲು ತೆರೆಮರೆಯ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಎಲ್ಲದರ ನಡುವೆ ಇದೀಗ ಕಾಂಗ್ರೆಸ್​ ಮೂಲಗಳಿಂದ ಸ್ಫೋಟಕ ಮಾಹಿತಿಯೊಂದು ಹೊರಬಂದಿದೆ.

ಈ ತಿಂಗಳ ಅಂತ್ಯದಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ ಎನ್ನಲಾಗ್ತಿದೆ. ಆದರೆ 2028ಕ್ಕೆ ಮತ್ತೆ ಸಿದ್ದರಾಮಯ್ಯರ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದ್ದು ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಇನ್ನು ಕೆಲ ದಿನಗಳ ಹಿಂದೆಯಷ್ಟೇ ಸಿಎಂ ಸ್ಥಾನ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ , ಹೈಕಮಾಂಡ್​ ನಿರ್ಧಾರ ಮಾಡಿದರೆ ನಾನೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ನುಡಿದಿದ್ದರು.

ಇದನ್ನೂ ಓದಿ : ಭಾನುವಾರ ಬೆಳ್ಳಂಬೆಳಗ್ಗೆ ಮಾಜಿ ಸಚಿವರ ಬಂಧನ : ಕಲಬೆರಕೆ ಮಧ್ಯ ತಯಾರಿ ಜಾಲದ ಕೈವಾಡದ ಆರೋಪ

ಈ ಮೂಲಕ ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್​ ಮಟ್ಟದಲ್ಲಿ ನಡೆಯುತ್ತಿದೆ ಎಂಬುದರ ಸುಳಿವು ಬಿಟ್ಟುಕೊಟ್ಟಿದ್ದರು.ಇನ್ನು ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ವಿಚಾರವಾಗಿ ಸಾಕಷ್ಟು ಪರ ವಿರೋಧದ ಚರ್ಚೆಗಳು ನಡೆಯುತ್ತಿದೆ.

ಕಳೆದ ಬಾರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಳಿಸಿ ಬಸವರಾಜ ಬೊಮ್ಮಾಯಿಯವರನ್ನು ಸಿಎಂ ಸ್ಥಾನಕ್ಕೇರಿಸಿದ ಬಿಜೆಪಿ ಹೈಕಮಾಂಡ್​ ನಿರ್ಧಾರ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಬಹುದೊಡ್ಡ ಪೆಟ್ಟನ್ನೇ ನೀಡಿತ್ತು.

ಇದೀಗ ಕಾಂಗ್ರೆಸ್​ ಹೈಕಮಾಂಡ್​ ನಿರ್ಧಾರ ಏನಿರಬಹುದು ? ಸಿಎಂ ಸ್ಥಾನ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

Siddaramaiah resign as CM? Will contest again from Varuna constituency 2028

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories