ರಾಜ್ಯಾದ್ಯಂತ ನಾಳೆಯಿಂದ ಮತಪಟ್ಟಿ ವಿಶೇಷ ಪರಿಷ್ಕರಣೆ ಆರಂಭ : ಮನೆ ಮನೆಗೆ ಬರಲಿದೆ ಎಸ್​ಐಆರ್ ತಂಡ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ನಾಳೆಯಿಂದ ಅಧಿಕೃತವಾಗಿ ಚಾಲನೆ ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಖುದ್ದಾಗಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ನಾಳೆಯಿಂದ ಅಧಿಕೃತವಾಗಿ ಚಾಲನೆ ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಖುದ್ದಾಗಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ವೋಟರ್ ಲಿಸ್ಟ್‌ನಲ್ಲಿ ಹೆಸರು ಕಳೆದುಕೊಂಡರೆ ಯಾವುದೇ ಗ್ಯಾರಂಟಿ ಯೋಜನೆಗಳು ಸಿಗುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಲಾಗಿದ್ದು, ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ತಿಳಿಸಲಾಗಿದೆ.

ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿಯನ್ನು ಅತ್ಯಂತ ನಿಖರವಾಗಿ ಇಡಲು ಈ ಪ್ರಕ್ರಿಯೆ ನಡೆಸುತ್ತದೆ. ಇದರ ಮೂಲಕ ಅನರ್ಹ ಮತದಾರರು, ಮೃತರಾದವರು ಮತ್ತು ಎರಡು ಕಡೆ ಹೆಸರಿರುವವರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗಿದ್ದರೆ ಮರಳಿ ಸೇರಿಸಲು ಇದು ಸಹಕಾರಿಯಾಗಿದೆ. ದೇಶಾದ್ಯಂತ ಮತದಾರರ ಪಟ್ಟಿಯನ್ನು ನವೀಕರಿಸುವ ಉದ್ದೇಶದಿಂದ ಇತ್ತೀಚೆಗೆ ಬಿಹಾರದಲ್ಲಿ ಮೊದಲ ಬಾರಿಗೆ ಈ ತಂತ್ರಜ್ಞಾನ ಆಧಾರಿತ ಪ್ರಕ್ರಿಯೆ ನಡೆಸಲಾಗಿತ್ತು. ಎರಡನೇ ಹಂತದಲ್ಲಿ 9 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಶಸ್ವಿಯಾಗಿ ಮುಗಿದಿದ್ದು, ಈಗ ಮೂರನೇ ಹಂತದಲ್ಲಿ ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಜಾರಿಗೆ ತರಲಾಗುತ್ತಿದೆ.

Also Read: ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಗೃಹ ಇಲಾಖೆ ವರದಿ: ಬೆಂಗಳೂರಲ್ಲೇ 10 ಸಾವಿರಕ್ಕೂ ಅಧಿಕ ಅಕ್ರಮ ವಲಸಿಗರು

ಮನೆಗೆ ಭೇಟಿ ನೀಡುವ ಅಧಿಕಾರಿಗಳಿಂದ ನಿಗದಿತ ಅರ್ಜಿ ಫಾರಂ ಪಡೆದು, ಸರಿಯಾದ ಮಾಹಿತಿ ತುಂಬಿ ನೀಡಬೇಕು. ಅದರಲ್ಲಿ ಒಂದು ಪ್ರತಿಯನ್ನು ಸಾರ್ವಜನಿಕರು ತಮ್ಮ ಬಳಿ ದಾಖಲೆಯಾಗಿ ಇಟ್ಟುಕೊಂಡು, ಮತ್ತೊಂದನ್ನು ಅಧಿಕಾರಿಗಳಿಗೆ ಮರಳಿಸಬೇಕು. ಹೊಸ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮರಣ ಹೊಂದಿದವರ ಹೆಸರು ತೆಗೆದುಹಾಕಲು ಇದು ಸುವರ್ಣಾವಕಾಶ. ಅಧಿಕಾರಿಗಳು ತಮ್ಮ ಬಳಿಯಿರುವ ಪ್ರತಿಯನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಿದ್ದಾರೆ.

ಜೂನ್​ 30ರಿಂದ ಜುಲೈ 29ರ ಒಳಗಾಗಿ ಬಿಎಲ್​ಓಗಳಿಂದ ಮನೆ ಮನೆ ಭೇಟಿ ಕಾರ್ಯ ನಡೆಯಲಿದೆ. ಆಗಸ್ಟ್​ 5ರಂದು ಕರಡು ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ. ಆಗಸ್ಟ್​ 5ರಿಂದ ಸೆಪ್ಟೆಂಬರ್​ 4ರ ಒಳಗಾಗಿ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶ ಸಲ್ಲಿಸಲಾಗಿದೆ. ಅಕ್ಟೋಬರ್​ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ.

Special revision of electoral rolls begins across the state from tomorrow SIR team will visit every house

 

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories