ರಾಜ್ಯದಲ್ಲಿ ಶುರು ವರುಣನ ಮಹಾಆರ್ಭಟ : ನಾಳೆಯಿಂದ ರಾಜಧಾನಿ ಸೇರಿದಂತೆ ಹಲವೆಡೆ ಭಾರೀ ಮಳೆ

ರಾಜ್ಯಾದ್ಯಂತ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ಕರ್ನಾಟಕದಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಗಾಳಿ-ಮಳೆಯ ತೀವ್ರತೆ ಹೆಚ್ಚಿರಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಐಎಂಡಿ ತಿಳಿಸಿದೆ.

ರಾಜ್ಯಾದ್ಯಂತ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ಕರ್ನಾಟಕದಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಗಾಳಿ-ಮಳೆಯ ತೀವ್ರತೆ ಹೆಚ್ಚಿರಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಐಎಂಡಿ ತಿಳಿಸಿದೆ.

ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಜೂನ್ 9ರವರೆಗೆ ರಾಜ್ಯದ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಮುಖ 11 ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಗೆ ಅಧಿಕಾರಿಗಳು ‘ಆರೆಂಜ್ ಅಲರ್ಟ್’ ಘೋಷಿಸಿದ್ದಾರೆ.
ವರದಿಯ ಪ್ರಕಾರ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

Also Read: ಸಿಎಂ ಆದ ಬೆನ್ನಲ್ಲೇ ರಾಜ್ಯದ ಜನತೆಗೆ ಡಿಕೆಶಿ ಗುಡ್​ನ್ಯೂಸ್​ : ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್​ಪಾಸ್​

ಇದು ಕೈಗೆ ಬಂದ ಬೆಳೆಗಳನ್ನು ನಾಶಪಡಿಸುವ ಸಾಧ್ಯತೆ ಇರುವುದರಿಂದ ಕೃಷಿ ಚಟುವಟಿಕೆಗಳ ವಿಷಯದಲ್ಲಿ ಜಾಗರೂಕರಾಗಿರಲು ಹವಾಮಾನ ತಜ್ಞರು ಸಲಹೆ ನೀಡಿದ್ದಾರೆ.ಇನ್ನೊಂದೆಡೆ, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲೂ ಮಳೆ ಮುಂದುವರಿಯಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಳ್ಳಲಿರುವುದರಿಂದ ಯಾವುದೇ ಕಾರಣಕ್ಕೂ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ ವಾರದಿಂದ ಮಳೆಯ ಪ್ರಮಾಣ ಮತ್ತಷ್ಟು ಏರಿಕೆಯಾಗಲಿದೆ. ನಗರದ ಹಲವು ಪ್ರದೇಶಗಳಲ್ಲಿ ಸಂಜೆ ಮತ್ತು ರಾತ್ರಿಯ ವೇಳೆ ಮಿಂಚು-ಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

The great monsoon season has begun in the state Heavy rains in many places including the capital from tomorrow

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories