ಕಾಫಿನಾಡಿನಲ್ಲಿ ವರುಣನ ಅಬ್ಬರ: ರಾಜ್ಯದಲ್ಲಿ 3 ದಿನ ಹೈ ಅಲರ್ಟ್‌!

ಕರ್ನಾಟಕ ರಾಜ್ಯದಾದ್ಯಂತ ಮಳೆ ಬಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಯು ಕಾಫಿನಾಡು ಜನರ ನೆಮ್ಮದಿಯನ್ನು ಕಸಿದುಕೊಂಡಿದೆ.

ಕರ್ನಾಟಕ ರಾಜ್ಯದಾದ್ಯಂತ ಮಳೆ ಬಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಯು ಕಾಫಿನಾಡು ಜನರ ನೆಮ್ಮದಿಯನ್ನು ಕಸಿದುಕೊಂಡಿದೆ.

ಅದರಲ್ಲೂ ಆಲಿಕಲ್ಲು ಮಳೆಯ ಹೊಡೆತಕ್ಕೆ ಜನಜೀವನ ತತ್ತರಿಸಿ ಹೋಗಿದೆ. ಈ ನಡುವಲ್ಲೇ ಹವಾಮಾನ ಇಲಾಖೆ ಹೈ ಅಲರ್ಟ್‌ ಘೋಷಿಸಿದ್ದು, ಮುಂದಿನ 72 ಗಂಟೆಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ ತಾಲೂಕುಗಳಲ್ಲಿ ಮಳೆಯ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಆಲಿಕಲ್ಲು ಮಳೆಗೆ ಲಕ್ಷಾಂತರ ಮೌಲ್ಯದ ಬೆಳೆ ನಾಶವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಝ್ಯದಲ್ಲಿ ಮಳೆ ಇನ್ನಷ್ಟು ತೀವ್ರವಾಗಲಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ ಮಾತ್ರವಲ್ಲದೇ ದಾವಣಗರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ. ಅಲ್ಲದೇ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ.

Also Read: ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರ ಹರಿವು: ಆದಾಯದಲ್ಲಿ ಹೊಸ ದಾಖಲೆ!

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ. ವಾರಾಂತ್ಯಕ್ಕೆ ಮುಂಗಾರು ಅಂಡಮಾನ್‌ ಪ್ರವೇಶಿಸಲಿದ್ದು, ಜೂನ್‌ ಮದಲ ವಾರದಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ.

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿ ಇರುವುದರಿಂದ ಪ್ರವಾಸಿಗರು ಮಲೆನಾಡು ಹಾಗೂ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಪ್ರವಾಸ ಕೈಗೊಳ್ಳುವ ವೇಳೆ ಎಚ್ಚರಿಕೆ ವಹಿಸುವುದು ಒಳಿತು.

Varuna storm in the coffee country High alert in the state for 3 days

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories