ಆರ್​ಎಸ್​ಎಸ್​ ಹೆಸರು ಹೇಳದೆ ಕಾರ್ಯಚಟುವಟಿಕೆಗೆ ನಿಷೇಧ ಹೇರಿದ ರಾಜ್ಯ ಸರ್ಕಾರ

ಬೆಂಗಳೂರು: Ban RSS: ರಾಜ್ಯದಲ್ಲಿ ಆರ್​ಎಸ್​ಎಸ್​ ಸಂಘಟನೆಯ ಕಾರ್ಯಚಟುವಟಿಕೆಗಳಿಗೆ ಬ್ರೇಕ್​ ಬೀಳುವ ವಿಚಾರವಾಗಿ ಸಾಕಷ್ಟು ಪರ – ವಿರೋಧದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರ ಜಾಣ ನಡೆ ಅನುಸರಿಸಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ತನ್ನ ಯಾವುದೇ ಕಾರ್ಯ ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆದುಕೊಳ್ಳಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.

ಈ ಮೂಲಕ ನೇರವಾಗಿ ಆರ್​ಎಸ್​ಎಸ್​ ಹೆಸರು ತೆಗೆದುಕೊಳ್ಳದೇ ಸರ್ಕಾರಿ ಶಾಲೆ, ಮೈದಾನಗಳಲ್ಲಿ ನಡೆಯುತ್ತಿದ್ದ ಸಂಘಟನೆಯ ಕಾರ್ಯಗಳಿಗೆ ಬ್ರೇಕ್​ ಹೇರುವ ಕಾರ್ಯವನ್ನು ಸರ್ಕಾರ ಮಾಡಿದೆ. ಅಂದಹಾಗೆ ಈ ನಿಯಮ ಕೇವಲ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ.

Also Read: RSS Ban : ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಬ್ಬಂದಿ ಅಮಾನತು : ಸಚಿವ ಪ್ರಿಯಾಂಕ ಖರ್ಗೆ

ಈ ನಿಯಮದ ಅನುಸಾರ ಯಾವುದೇ ಖಾಸಗಿ ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರಲಿದೆ. ತಮಿಳುನಾಡು ಸರ್ಕಾರದಲ್ಲಿಯೂ ಈ ಮಾದರಿಯ ನೀತಿ ಜಾರಿಮಾಡಲಾಗಿದೆ ಎಂದು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ ಎಲ್ಲಿಯೂ ಆರ್​ಎಸ್​ಎಸ್​ ಹೆಸರು ಪ್ರಸ್ತಾಪಿಸದೇ ಜಾಣ ನಡೆ ಅನುಸರಿಸಿದ್ದಾರೆ.

ಈ ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್​ ಖರ್ಗೆ ಎಲ್ಲಾ ಸಂಘಟನೆಗಳಿಗೂ ಒಂದೇ ನಿಯಮ ಜಾರಿಗೆ ಬರಲಿದೆ. ಸಂಘ ಸಂಸ್ಥೆಗಳನ್ನು ನಿಯಂತ್ರಣ ಮಾಡುವುದಿಲ್ಲ. ಆದರೆ ಸರ್ಕಾರಿ ಸ್ಥಳಗಳಲ್ಲಿ ಕಾರ್ಯಚಟುವಟಿಕೆ ನಡೆಸಲು ಅನುಮತಿ ಪಡೆಯಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಲಾಠಿ ಬೀಸುವುದು, ಪಥ ಸಂಚಲನ ಹೋಗುವುದು ಇನ್ನು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಆರ್​ಎಸ್​ಎಸ್​ಗೆ ಪರೋಕ್ಷ ಟಾಂಗ್​ ನೀಡಿದ್ದಾರೆ.

Also Read: RSS Ban: ಸರಕಾರಿ ಶಾಲೆಗಳಿಂದ ಸಾರ್ವಜನಿಕರನ್ನು ದೂರ ಮಾಡುವ ಹುನ್ನಾರ : ಸುನಿಲ್ ಕುಮಾರ್

ಸಚಿವ ಪ್ರಿಯಾಂಕ್ ಖರ್ಗೆ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸರ್ಕಾರಿ ಸ್ಥಳಗಳಲ್ಲಿ ಆರ್​​ಎಸ್​ಎಸ್​ನ ಕಾರ್ಯಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪ್ರಿಯಾಂಕ್ ಖರ್ಗೆ ಈ ನಡೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ಇದೀಗ ಸರ್ಕಾರ ಸಂಪುಟ ಸಭೆಯಲ್ಲಿ ಇಂತಹ ನಿರ್ಧಾರ ಕೈಗೊಂಡಿದೆ.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories