Cast survey: Online, ವೆಬ್‌ಸೈಟ್‌ನಲ್ಲೂ ಜಾತಿ ಸಮೀಕ್ಷೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯು ಡಿಸೆಂಬರ್‌ ಅಂತ್ಯದ ಒಳಗಾಗಿ ಸಲ್ಲಿಕೆಯಾಗಲಿದೆ. ಈ ಬಾರಿ ಆನ್ಲೈನ್‌(online) ಹಾಗೂ ವೆಬ್‌ಸೈಟ್‌(website) ಮೂಲಕವೂ ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ‌ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದ್ದಾರೆ ಎಂದಿದ್ದಾರೆ.

ಎಲ್ಲಾ ಜಾತಿ, ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರವೇ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮ ರೂಪಿಸಲು ಸಾಧ್ಯ. ಬಡತನ,ಅನಕ್ಷರತೆ, ನಿರುದ್ಯೋಗ ಹೋಗಲಾಡಿಸಲು ಸಂವಿಧಾನದ ಕಲಂ 15(), 16(5) ಅಡಿಯಲ್ಲಿ, ವಿಶೇಷವಾದ ಕಾರ್ಯಕ್ರಮ ರೂಪಿಸಬೇಕಿದೆ. ಹೀಗಾಗಿ ಹೊಸದಾಗಿ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಗತಿ ಅರಿಯಲು ಈ ಸಮೀಕ್ಷೆ ನಡೆಸಲಾಗುತ್ತದೆ ಎಂದಿದ್ದಾರೆ.

ಸಾಧ್ಯವಾದಷ್ಟು ಜಾಗೃತೆಯಿಂದಲೇ ಸಮೀಕ್ಷೆ ನಡೆಸಿ ವರದಿಯನ್ನು ಕೊಡಲು ಸೂಚನೆ ನೀಡಿದ್ದೇವೆ. ಹಿಂದುಳಿದ ಆಯೋಗದವರು ಡಿಸೆಂಬರ್ ಒಳಗೆ ವರದಿ ಕೊಡುವ ನಿರೀಕ್ಷೆಯಲ್ಲಿದ್ದಾರೆ ಎಂದರು.

ಕರ್ನಾಟಕ ರಾಜ್ಯದಾದ್ಯಂತ 22 ಸೆಪ್ಟೆಂಬರ್ 2025 ರಿಂದ ಅಕ್ಟೋಬರ್ 7ರ ಒಳಗಾಗಿ ಸಮೀಕ್ಷೆ ಮುಗಿಸಲು ತೀರ್ಮಾನ ಕೈಗೊಳ್ಳಲಾಗಿದೆ. 175000 ಸರ್ಕಾರಿ ಶಾಲಾ ಶಿಕ್ಷಕರುಗಳನ್ನು ವಿಶೇಷ ಭತ್ಯೆ ನೀಡಿ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಜಾತಿ ಸಮೀಕ್ಷೆಗಾಗಿ 325 ಕೋಟಿ ವಿಶೇಷ ಭತ್ಯೆ ಆಗಲಿದೆ. ಸದ್ಯ 425 ಕೋಟಿ ಹಣ ಕೊಡುವುದಾಗಿ ಹೇಳಿದ್ದೇವೆ. ಹೆಚ್ಚಿನ‌ ಹಣದ ಅಗತ್ಯಬಿದ್ದರೆ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ರಾಜ್ಯದ ಪ್ರತೀ ಮನೆಗೂ ಮೀಟರ್ ರೀಡರ್ ಗಳು ತೆರಳಿ jio tag ಮಾಡುವ ಜೊತೆಗೆ, 2 ಕೋಟಿ ಮನೆಗಳಿಗೆ ಪ್ರತ್ಯೇಕ ಗುರುತಿನ ನಂಬರ್ ನೀಡಿ ಸ್ಟಿಕ್ಕರ್ ಅಂಟಿಸುತ್ತಾರೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲಿಗೆ ಲಿಂಕ್ ಮಾಡುವುದರ ಜೊತೆಗೆ, ಮೊಬೈಲ್ ಇಲ್ಲದ ಮನೆಗಳಿಗೆ ಖುದ್ದು ತೆರಳಿ ಸಮೀಕ್ಷೆ ನಡೆಸಲಿದ್ದಾರೆ.

ಸಮೀಕ್ಷೆಗಾಗಿ ಒಟ್ಟು 60 ಪ್ರಶ್ನೆಗಳನ್ನು ಫೈನಲ್ ಮಾಡಲಾಗಿದ್ದು ಈ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದು ಸಮೀಕ್ಷೆ ನಡೆಸಲಿದ್ದಾರೆ. ರಾಜ್ಯದ ಜನತೆ ಒಬ್ಬರೂ ತಪ್ಪಿಸಿಕೊಳ್ಳದೆ ಕಡ್ಡಾಯವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಜಾತಿ ಸಮೀಕ್ಷೆಗಾಗಿಯೇ ಸಹಾಯವಾಣಿ ಸಂಖ್ಯೆ ತೆರೆಯಲಾಗಿದ್ದು, ಜನರು ಕರೆ ಮಾಡುವ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. online ಹಾಗೂ website ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು ಎಂದಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ ಸಮೀಕ್ಷೆ, ಹೊಸ ಜಾತಿಯ ನಾಮಕರಣ ಬೇಡ: ಸುನಿಲ್‌ ಕುಮಾರ್

ಇನ್ನು ಆಶಾ ಕಾರ್ಯಕರ್ತೆಯರು ನಾಳೆಯಿಂದಲೇ ಮನೆ ಮನೆಗೆ ಹೋಗಿ 60 ಪ್ರಶ್ನೆಗಳ ನಮೂನೆಯನ್ನು ಪ್ರತೀ ಮನೆಗೆ ತಲುಪಿಸುತ್ತಾರೆ. ಬಳಿಕ ಶಿಕ್ಷಕರು ಹೋಗುತ್ತಾರೆ.ಯಾರೂ ಕೂಡ ಸಮೀಕ್ಷೆಯಿಂದ ಹೊರಗೆ ಉಳಿಯದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದಿದ್ದಾರೆ.

ಜಾತಿ ಹೇಳಿಕೊಳ್ಳಲು ಕಷ್ಟ ಆದವರು ಸಹಾಯವಾಣಿಗೆ ಕರೆ ಮಾಡಿ ಜಾತಿ ಹೇಳಬಹುದು. ಯಾವುದೇ ನ್ಯೂನ್ಯತೆಗಳು ಇಲ್ಲದಂತೆ, ಹಿಂದಿನ ಸಮೀಕ್ಷೆಗಳಲ್ಲಿ ಎದುರಾದ ಯಾವುದೇ ತಾಂತ್ರಿಕ ಸಮಸ್ಯೆ ಈ ಬಾರಿ ಇಲ್ಲದಂತೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಬಿಲ್ಲವ ಕ್ರಿಶ್ಚಿಯನ್‌, ಈಡಿಗ ಕ್ರಿಶ್ಚಿಯನ್‌ ಬಳಕೆ ಆರ್ಯ ಈಡಿಗ ಸಂಘ ವಿರೋಧ

ಮತಾಂತರಗೊಂಡವರು ಅಥವಾ ಜಾತಿ ಗೊಂದಲ ಇದ್ದದ್ದನ್ನು ಆಯೋಗದ ತಜ್ಞರ ತಂಡ ವಿಶ್ಲೇಷಣೆ ಮಾಡಿ ತೀರ್ಮಾನಿಸುತ್ತಾರೆ ಎಂದರು.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories