CM Siddaramaiah: ಸಿಎಂ ಬದಲಾವಣೆ, ಸಚಿವರಿಗೆ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ಬೆಂಗಳೂರು: CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದರು. ಭರ್ಜರಿ ಊಟದ ಜೊತೆಗೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಕೆಲವೊಂದು ಕಿವಿಮಾತು ಹೇಳಿದ್ದಾರೆ.
ಡಿನ್ನರ್ ಪಾರ್ಟಿಯಲ್ಲಿ ವೆರೈಟಿ ಊಟದ ಜೊತೆಗೆ ರಾಜಕೀಯ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಾಗಿದೆ. ಬಿಹಾರ ಚುನಾವಣೆ, ಸರಕಾರಿ ಸ್ಥಳದಲ್ಲಿ ಆರ್ಎಸ್ಎಸ್ ಗೆ ನಿರ್ಬಂಧದ ಕುರಿತು ಚರ್ಚೆ ನಡೆದಿದೆ.
ಸಚಿವ ಸಂಪುಟ ಪುನರ್ ರಚನೆ, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ, ಬಿಹಾರ ವಿಧಾನಸಭಾ ಚುನಾವಣೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ, ರಾಜ್ಯ ಸರಕಾರದ ಅನುದಾನದ ಬಳಕೆ ಸೇರಿದಂತೆ ಹಲವು ವಿಚಾರ ಕುರಿತು ಚರ್ಚೆ ನಡೆಸಲಾಗಿದೆ.
ಪಕ್ಷ ಸಂಘಟನೆಗೆ ಸಿದ್ದವಾಗಿರಿ : ಸಚಿವರಿಗೆ ಸೂಚನೆ
ಕರ್ನಾಟಕದಲ್ಲಿ ಸರಕಾರ ರಚನೆಯಾಗಿ ಎರಡೂವರೆ ವರ್ಷ ಕಳೆಯುತ್ತಾ ಬಂದಿದೆ. ಹೀಗಾಗಿ ನಿಮ್ಮ ಇಲಾಖೆಯಲ್ಲಿ ಸುಧಾರಣೆಯನ್ನು ತರಬೇಕು. ಸಚಿವ ಸಂಪುಟ ವಿಸ್ತರಣೆ ಆಗಲಿದ್ದು, ಒಂದೊಮ್ಮೆ ಪಕ್ಷ ಭಯಸಿದರೆ ನೀವು ಪಕ್ಷ ಸಂಘಟನೆಯ ಕಾರ್ಯಕ್ಕೆ ಸಿದ್ದರಾಯ ಬೇಕು ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.
Also Read: ಆರ್ಎಸ್ಎಸ್ಗೆ ನಿಷೇಧ ಹೇರಲು ಎಂದಿಗೂ ಸಾಧ್ಯವಿಲ್ಲ : ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ತಿರುಗೇಟು
ಡಿಕೆ ಅನುಪಸ್ಥಿತಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಡಿನ್ನರ್ ಮೀಟಿಂಗ್ಗೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಊಟ ಮಾಡಿ ಕಾವೇರಿಯಿಂದ ತೆರಳಿದ್ದಾರೆ.
ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ನಾಯಕತ್ವ ಬದಲಾವಣೆಯ ಕುರಿತು ಚರ್ಚೆ ನಡೆಸಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.
Also Read: ನವೆಂಬರ್ ಕ್ರಾಂತಿ ನಡೆಯುತ್ತಾ ? ಸಿಎಂ ಡಿನ್ನರ್ ಮೀಟಿಂಗ್ ರಹಸ್ಯವೇನು ?



