ಶಾಸಕ ಸುನಿಲ್‌ ಕುಮಾರ್‌ ವಿರುದ್ದ ಮುತಾಲಿಕ್ ಮಾನನಷ್ಟ ಮೊಕದ್ದಮೆ‌ ವಜಾ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ (Karkala MLA Sunil Kumar) ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುನಿಲ್‌ ಕುಮಾರ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಅಲ್ಲದೇ ಜಯಗಳಿಸಿದ್ದರು. ಆದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋಲು ಕಂಡಿದ್ದ ಶ್ರೀರಾಮ ಸೇನೆಯ ಪ್ರಮೋದ್‌ ಮುತಾಲಿಕ್‌ ಅವರು ಸುನಿಲ್‌ ಕುಮಾರ್‌ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಅಂದ್ರೆ 2023ರ ಮೇ 14ರಂದು ಕಾರ್ಕಳದ ಬಂಡಿಮಠ ಬಸ್‌ ನಿಲ್ದಾಣದ ಬಳಿಯಲ್ಲಿ ಸಾರ್ವಜನಿಕ ಸಭೆ ನಡೆದಿದ್ದರು. ಈ ಸಭೆಯಲ್ಲಿ ಸುನಿಲ್‌ ಕುಮಾರ್‌ ಅವರು ಮಾತನಾಡಿದ್ದು, ಈ ವೇಳೆಯಲ್ಲಿ ಪ್ರಮೋದ್‌ ಮುತಾಲಿಕ್‌ ಅವರೇ, ಉತ್ತರ ಕರ್ನಾಟಕದಲ್ಲಿ ಹಣಕ್ಕೋಸ್ಕರ ಹಿಂದೂಗಳ ಹತ್ಯೆಯನ್ನು ಟೈಗರ್‌ ಗ್ಯಾಂಗ್‌ ನೆಪದಲ್ಲಿ ಮಾಡಿಸಿದ್ದೀರಿ ? ಹತ್ಯೆ ಮಾಡಿದವರು ಇಂದಿಗೂ ಕಲಬುರಗಿ ಜೈಲಿನಲ್ಲಿದ್ದಾರೆಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ : ಧರ್ಮಸ್ಥಳ ಎಸ್‌ಐಟಿ ತನಿಖೆ : ಮಧ್ಯಂತರ ವರದಿ ಕೊಡಿ

ಈ ಕುರಿತು ಪ್ರಮೋದ್‌ ಮುತಾಲಿಕ್‌ ಶಾಸಕ ಸುನಿಲ್‌ ಕುಮಾರ್‌ ಅವರ ವಿರುದ್ದ ಬೆಂಗಳೂರಿನ ನ್ಯಾಯಾಲಯದಲ್ಲಿ 2023ರ ಸೆಪ್ಟೆಂಬರ್‌ 7ರಂದು ದೂರು ಸಲ್ಲಿಸಿದ್ದರು. ತನ್ನ ವಿರುದ್ದ ಸಲ್ಲಿಕೆ ಆಗಿರುವ ದೂರನ್ನು ರದ್ದುಪಡಿಸುವಂತೆ ಕೋರಿ ಸುನಿಲ್‌ ಕುಮಾರ್‌ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಾಯಾಲಯದ ಮೆಟ್ಟಿಲೇರಿದ್ದರು.

ಇದೀಗ ಜನಪ್ರತಿನಿಧಿಗಳ ನ್ಯಾಯಾಲಯವು ಪ್ರಮೋದ್ ಮುತಾಲಿಕ್ ದಾಖಲಿಸಿದ್ದ ಪ್ರಕರಣವನ್ನು ಖುಲಾಸೆಗೊಳಿಸಿದೆ. ಇದರಲ್ಲಿ ಮಾನನಷ್ಟ ಆಗುವಂಥಹ ಯಾವುದೇ ವಿಚಾರಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ : ಗಣೇಶ ಚತುರ್ಥಿಗೆ ಡಿಜೆ ಬ್ಯಾನ್‌, ಮಣ್ಣಿನ ಗಣಪನಿಗಷ್ಟೇ ಅವಕಾಶ

Defamation case against Karkala MLA Sunil Kumar Muthalik dismissed in Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories