ವೀರೇಂದ್ರ ಪಪ್ಪಿಗೆ ಮತ್ತೆ ಶಾಕ್ : 40 ಕೆಜಿ ಚಿನ್ನ ಇಡಿ ವಶಕ್ಕೆ

ED raids Veerendra Puppy : ಚಿತ್ರದುರ್ಗ : ಆನ್ಲೈನ್ ಬೆಟ್ಟಿಂಗ್ (Online Betting) ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ಪಪ್ಪಿ ಮನೆಯಲ್ಲಿ ಬರೋಬ್ಬರಿ 40 ಕೆಜಿಗೂ ಅಧಿಕ ತೂಕದ ಚಿನ್ನದ ಬಾರ್ಗಳು ಪತ್ತೆಯಾಗಿದೆ.
ಆನ್ಲೈನ್ ಬೆಟ್ಟಿಂಗ್ ಮೂಲಕ ಕೋಟ್ಯಾಂತರ ರೂಪಾಯಿ ಅಕ್ರಮ ಆಸ್ತಿ ಸಂಪಾದನೆಯ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಪಪ್ಪಿ ಮನೆಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿಗೆ ಸೇರಿದ ಎರಡು ಲಾಕರ್ಗಳನ್ನು ಇಡಿ ವಶಕ್ಕೆ ತೆಗೆದುಕೊಂಡಿದೆ. ಈ ಲಾಕರ್ಗಳಲ್ಲಿ ಒಟ್ಟು 40 ಕೆಜಿಗೂ ಅಧಿಕ ತೂಕದ್ದು ಎಂದು ಹೇಳಲಾಗಿದೆ.
ಜಾರಿ ನಿರ್ದೇಶನಾಲಯ (ಇಡಿ) ಆಘಾತದ ಮೇಲೆ ಆಘಾತ ನೀಡುತ್ತಿದೆ. ಪಪ್ಪಿ ಲಾಕರ್ನಲ್ಲಿ ಪತ್ತೆಯಾಗಿರುವ ಚಿನ್ನದ ಒಟ್ಟು ಮೊತ್ತ 50 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ.
ಚಳ್ಳಕೆರೆಯ ಫೆಡರಲ್ ಬ್ಯಾಂಕ್ ಸೇರಿದಂತೆ ಪಟ್ಟಣದ ಹಲವಾರು ಸ್ಥಳಗಳಲ್ಲಿ ಅಧಿಕಾರಿಗಳು ಶೋಧಕಾರ್ಯವನ್ನು ಮುಂದುವರಿಸಿದ್ದಾರೆ. ಆನ್ಲೈನ್ ಬೆಟ್ಟಿಂಗ್ನಲ್ಲಿ ಅವರು ಕಡಿಮೆ ಅವಧಿಯಲ್ಲಿ 2,000 ಕೋಟಿ ರೂ. ಲಾಭ ಗಳಿಸಿದ್ದರು.
ಇಡಿ ದಾಳಿಯ ಸಮಯದಲ್ಲಿ ಅವರು ಹಿಂದೆ 103 ಕೋಟಿ ರೂ. ಲಾಭ ಗಳಿಸಿದ್ದರು ಎಂದು ತಿಳಿದುಬಂದಿದೆ. ದಾಳಿ ನಡೆಸಿದ ಇಡಿ ಅಧಿಕಾರಿಗಳು 103 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದರು.
ಇದನ್ನೂ ಓದಿ : ಬಿಗ್ಬಾಸ್ಗೆ ಬೀಗ ಮುದ್ರೆ, ಸರಕಾರದಿಂದ ಭ್ರಷ್ಟಾಚಾರ : ಸುನಿಲ್ ಕುಮಾರ್
ಆನ್ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಮತ್ತು ಕ್ಯಾಸಿನೊಗಳಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ನಂತರ ವೀರೇಂದ್ರ ಪಪ್ಪಿ ಅವರ ಮನೆ ಮತ್ತು ಕಚೇರಿಯ ಮೇಲೆ ಇಡಿ ದಾಳಿ ನಡೆಸಿತ್ತು.
ಇಡಿ ಸುಮಾರು 30 ಸ್ಥಳಗಳ ಮೇಲೆ ದಾಳಿ ನಡೆಸಿತು, ದಾಳಿಯ ಸಮಯದಲ್ಲಿ, 150 ಕೋಟಿ ರೂ. ಮೌಲ್ಯದ ಆಸ್ತಿ ದಾಖಲೆಗಳು, 12 ಕೋಟಿ ರೂ. ನಗದು, 6 ಕೋಟಿ ರೂ. ಚಿನ್ನ, ವಿದೇಶಿ ಕರೆನ್ಸಿ ಮತ್ತು ಕೋಟಿ ರೂ. ಮೌಲ್ಯದ ಇತರ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆಗಸ್ಟ್ 29 ರ ಬೆಳಗಿನ ಜಾವ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ ಮತ್ತು ಅವರ ಸಹೋದರರಾದ ಕೆ.ಸಿ. ತಿಪ್ಪೇಸ್ವಾಮಿ ಮತ್ತು ನಾಗರಾಜ್ ಅವರ ಮನೆಗಳಲ್ಲಿ ಬೆಳಿಗ್ಗೆ 5:30 ರಿಂದ 12:45 ರವರೆಗೆ ಸಂಪೂರ್ಣ ಶೋಧ ನಡೆಸಿ ಹಲವು ದಾಖಲೆಗನ್ನು ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ : ಎಸ್ಟಿ ಮೀಸಲಾತಿಯಲ್ಲೂ ಬೇಕು ವರ್ಗೀಕರಣ : ಆದಿವಾಸಿ ನಾಯಕರ ಒತ್ತಾಯ
ದಾಳಿಯ ಅವಧಿಯಲ್ಲಿ ಇಡಿ ಅಧಿಕಾರಿಗಳು 12 ಕೋಟಿ ರೂ. ನಗದು, 1 ಕೋಟಿ ರೂ. ವಿದೇಶಿ ಕರೆನ್ಸಿ, 6 ಕೋಟಿ ರೂ. ಚಿನ್ನಾಭರಣಗಳು ಮತ್ತು 10 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ.
ಶಾಸಕ ಪಪ್ಪಿಗೆ ಸೇರಿದ 5 ಐಷಾರಾಮಿ ವಾಹನಗಳು, 17 ಬ್ಯಾಂಕ್ ಖಾತೆಗಳು ಮತ್ತು 2 ಲಾಕರ್ಗಳನ್ನು ಸಹ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಲ್ಲದೇವೀರೇಂದ್ರ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಮತ್ತು 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಪತ್ತೆಯಾಗಿದೆ.
ಸಿಕ್ಕಿಂ ಗ್ಯಾಂಗ್ಟಾಕ್ಗೆ ಕ್ಯಾಸಿನೋ ಗುತ್ತಿಗೆ ಮಾತುಕತೆಗೆ ತೆರಳಿದ್ದ ವೇಳೆಯಲ್ಲಿ ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಪಪ್ಪಿಯನ್ನು ಇಡಿ ವಶಕ್ಕೆ ಪಡೆಯಲಾಗಿದೆ.
ವೀರೇಂದ್ರ ಪಪ್ಪಿಗೆ ಸೇರಿದ ಎರಡು ಲಾಕರ್ಗಳಲ್ಲಿ 50.33 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿಗಳು ಇಡಿ ಅಧಿಕಾರಿಗಳಿಗೆ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ವಶಪಡಿಸಿಕೊಂಡ ಒಟ್ಟು ಮೊತ್ತ 150 ಕೋಟಿ ರೂ.ಗಳನ್ನು ದಾಟಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಇಂಗ್ಲೀಷ್ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ : News Next LIve
ED raids Veerendra Puppy bank locker 40 kg gold bars seized



