ಬೆಂಗಳೂರಿನಿಂದ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಅಗ್ನಿ ದುರಂತ

ಬೆಂಗಳೂರು: Bus Fire Accident : ಸಿಲಿಕಾನ್‌ ಸಿಟಿ ಬೆಂಗಳೂರಿನಿಂದ ಹೊರಟಿದ್ದ ಬಸ್‌ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪವಾಢ ಸದೃಶರಾಗಿ ಪಾರಾಗಿರುವ ಘಟನೆ ಅನಂತರಪುರದಲ್ಲಿ ನಡೆದಿದೆ.

ಬೆಂಗಳೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಅನಂತಪುರ ಬಳಿಯಲ್ಲಿ ಚಲಿಸುತ್ತಿದ್ದ ವೇಳೆಯಲ್ಲಿ ಬಸ್‌ನ ಟಯರ್‌ ಸ್ಪೋಟಗೊಂಡಿದೆ. ಏಕಾಏಕಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ.

ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಚಾಲಕ ಬಸ್ಸನ್ನು ನಿದ್ರೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಎಚ್ಚರಗೊಂಡು, ಚಲಿಸುತ್ತಿದ್ದ ಬಸ್ಸಿನಿಂದಲೇ ಪ್ರಯಾಣಿಕರು ಹೊರಗೆ ಜಿಗಿದಿದ್ದಾರೆ.

Also read: ಕೇಶವ ಕೃಪಾ ಮುಂದೆ ಎನ್‌ಎಸ್‌ಯುಐ, ಯೂತ್‌ ಕಾಂಗ್ರೆಸ್‌ ಪ್ರತಿಭಟನೆ : ಬಿಜೆಪಿ ನಿಯೋಗದಿಂದ ಆಯುಕ್ತರಿಗೆ ದೂರು

ಬೆಂಕಿ ಹೊತ್ತಿದ್ರು ಬಸ್‌ ನಿಲ್ಲಿಸದ ಚಾಲಕ..!

ಅನಂತರಪುರ ಸಮೀಪದಲ್ಲಿ ಬಸ್ಸಿನಲ್ಲಿ ಬೆಂಕಿ (Bus Fire Accident) ಕಾಣಿಸಿಕೊಂಡಿದೆ. ಬಸ್‌ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಹೊತ್ತಿ ಉರಿಯುತ್ತಿದ್ದರೂ ಕೂಡ ಬಸ್ಸಿನ ಚಾಲಕ ಸುಮಾರು ಅರ್ಧ ಕಿಲೋ ಮೀಟರ್‌ ವರೆಗೆ ಬಸ್‌ ಚಲಾಯಿಸಿಕೊಂಡು ಹೋಗಿದ್ದಾನೆ.

ಈ ವೇಳೆಯಲ್ಲಿ ಪ್ರಯಾಣಿಕರು ಕೂಗಿಕೊಂಡಿದ್ದಾರೆ. ನಂತರ ಲಗೇಜ್‌ ಬಸ್ಸಿನಲ್ಲಿಯೇ ಬಿಟ್ಟು ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಬಸ್ಸಿನಿಂದ ಹೊರಗೆ ಬಂದಿದ್ದಾರೆ.

ಪ್ರಯಾಣಿಕರ ಲಗೇಜ್‌ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಲಗೇಜ್‌ ನಲ್ಲಿದ್ದ ದುಬಾರಿ ವಸ್ತುಗಳು ಸುಟ್ಟು ಹೋಗಿವೆ ಎಂದು ಪ್ರಯಾಣಿಕರು ಅಳಲು ತೋಡಿಕೊಂಡಿದ್ದಾರೆ.

Also Read: Sharavati Pump Project: ಶರಾವತಿ ಪಂಪ್‌ ಯೋಜನೆಗೆ ವಿರೋಧ : ಕೇದಾರನಾಥದಲ್ಲಿ ಉತ್ತರ ಕನ್ನಡ ಭಕ್ತರಿಂದ ಪ್ರಾರ್ಥನೆ

ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಕೂಡ ಬಸ್ಸನ್ನು ನಿಲ್ಲಿಸದ ಚಾಲಕ ಹಾಗೂ ಬಸ್ಸಿನ ಮಾಲಕನ ವಿರುದ್ದ ಅನಂತಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಬಸ್ಸಿನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೇಲ್ನೋಟಕ್ಕೆ ಬಸ್‌ ನ ಟಯರ್‌ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಪೊಲೀಸರ ತನಿಖೆಯಿಂದಷ್ಟೇ ಸತ್ಯಾಂಶ ಹೊರ ಬರುವುದಕ್ಕೆ ಸಾಧ್ಯ.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories