ಹೊನ್ನಾವರ : ನಾಳೆ ಈ ಭಾಗಗಳಲ್ಲಿ ಪವರ್‌ ಕಟ್‌

Honnavara: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ(Honnavar) ತಾಲೂಕಿನ ಕೆಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ತಿಳಿಸಿದೆ.

ಹೊನ್ನಾವರ ತಾಲೂಕಿನ ಕೆಲವು ಫೀಡರ್‌ ವ್ಯಾಪ್ತಿಯಲ್ಲಿ ಹೆಸ್ಕಾಂ ನಿರ್ವಹಣಾ ಕಾಮಗಾರಿಕೆಯನ್ನು ಕೈಗೆತ್ತಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3.30ರ ವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

Also Read : ಊರಿಗೆ ಹೋಗ್ಲಿಕ್ಕೆ ಮನಸ್ಸುಂಟು, ಆದರೆ ಬಸ್​ ರೇಟ್​ ತಲೆ ತಿರುಗಿಸುತ್ತಾ ಉಂಟು’ : ದೀಪಾವಳಿಗೆ ಖಾಸಗಿ ಬಸ್​​ ಮಾಲೀಕರಿಂದ ಹಗಲು ದರೋಡೆ

ಹೊನ್ನಾವರ ತಾಲೂಕಿನ ಗೇರುಸೊಪ್ಪ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಅಕ್ಟೋಬರ್‌ 18ರಂದು ಮಾಗೋಡ, ಉಪ್ಪೋಣಿ, ರೈಟ್, ಲೆಫ್ಟ್ ಹಾಗೂ ಕಾಲೋನಿ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಗೆ ಅಡ್ಡಿಯಾಗಲಿದೆ.

ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನೀಯರ್ (ವಿ) ಹಾಗೂ ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read: ವಿದ್ಯಾರ್ಥಿನಿ ಮೇಲೆ ಜೂನಿಯರ್‌ ವಿದ್ಯಾರ್ಥಿಯಿಂದ ಅತ್ಯಾ*ಚಾರ : ವಿದ್ಯಾರ್ಥಿ ಅರೆಸ್ಟ್‌

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories