ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಪಿತೃ ವಿಯೋಗ

ಕಾರ್ಕಳ (Karkala) : ಮಾಜಿ ಸಚಿವರು, ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರು ಆಗಿರುವ ವಿ.ಸುನಿಲ್ ಕುಮಾರ್ (MLA V Sunil Kumar) ಅವರ ತಂದೆ, ಆರ್‌ಎಸ್‌ಎಸ್‌ನ ಹಿರಿಯ ಮುಖಂಡರಾದ ಎಂಕೆ ವಾಸುದೇವ (MK Vasudev) ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚಿಗಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ( ಜುಲೈ 17) ಮುಂಜಾನೆ ವಿಧಿವಶರಾಗಿದ್ದಾರೆ.
ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಅವರು ಸೇರಿದಂತೆ ಮೃತರು ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Also Read : ಹೊಸ ಪಡಿತರ ಚೀಟಿ, ತಿದ್ದುಪಡಿಗೆ ಅವಕಾಶ : ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ
ಸಂಜೆ 4ಕ್ಕೆ ಅಂತ್ಯಕ್ರೀಯೆ
ವಾಸುದೇವ ಅವರ ಮೃತ ದೇಹ ಇಂದು ಮಧ್ಯಾಹ್ನ 1 ಗಂಟೆಗೆ ಕಾರ್ಕಳದ ಕಲಂಬಾಡಿಪದವಿನಲ್ಲಿ ಇರುವ ಶಾಸಕರ ನಿವಾಸಕ್ಕೆ ಆಗಮಿಸಲಿದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸಂಜೆ 4 ಗಂಟೆಗೆ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.
ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಎಂ.ಕೆ. ವಾಸುದೇವ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಂಘ ನೀಡಿದ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.
Also Read : ಯುಪಿಐ (UPI) ಹಣ ವರ್ಗಾವಣೆ : ಅಗಸ್ಟ್ 1ರಿಂದ ಹೊಸ ರೂಲ್ಸ್
Karkala MLA Sunil Kumar father RSS Senior Leader MK Vasudev Death



