ಕರ್ನಾಟಕದಲ್ಲಿ 24 ಗಂಟೆಯಲ್ಲಿ ಬಾರೀ ಮಳೆ : 16 ಜಿಲ್ಲೆಗಳಲ್ಲಿ ಐಎಂಡಿ ಎಚ್ಚರಿಕೆ
Karnataka Heavy rain: ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಬಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆ ಸುರಿದಿದೆ.
ರಾಜ್ಯದ 16 ಜಿಲ್ಲೆಗಳಲ್ಲಿ ಬಾರೀ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ 115.6 ಮಿ.ಮೀ ನಿಂದ 204.4 ಮಿ.ಮೀ ವರೆಗೆ ಮಳೆಯಾಗಲಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎನ್ನಲಾಗುತ್ತಿದೆ.
Also Read: ವೀರೇಂದ್ರ ಪಪ್ಪಿಗೆ ಮತ್ತೆ ಶಾಕ್ : 40 ಕೆಜಿ ಚಿನ್ನ ಇಡಿ ವಶಕ್ಕೆ
ಕರಾವಳಿ ಮಲೆನಾಡಲ್ಲಿ ಆರೆಂಜ್ ಅಲರ್ಟ್
ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಸರಿ ಸುಮಾರು 115.6 ಮಿಮೀ ನಿಂದ 204.4 ಮಿಮೀ ವರೆಗೆ ಮಳೆ ಸುರಿಯಲಿದೆ.
ದಕ್ಷಿಣ ಒಳನಾಡಿನ ಕರ್ನಾಟಕದ ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವಣಗೆರೆ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.
Also Read: Heavy Rainfall: ಅಕ್ಟೋಬರ್ 12 ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ
ಸಿಲಿಕಾನ್ ಸಿಟಿಯಲ್ಲಿ ಯೆಲ್ಲೋ ಅಲರ್ಟ್
ಯೆಲ್ಲೋ ಅಲರ್ಟ್ನಲ್ಲಿ ಸಾಮಾನ್ಯವಾಗಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆಯಾಗಲಿದೆ. ಸಿಲಿಕಾನ್ ಸಿಟಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ತಗ್ಗು ಪ್ರದೇಶಗಳಲ್ಲಿ ಹಾಗೂ ಸಮುದ್ರ, ನದಿ ತೀರದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಹವಮಾನ ಇಲಾಖೆ ಅಕ್ಟೋಬರ್ 12ರ ವರೆಗೆ ಭಾರೀ ಮಳೆಯ ಕುರಿತು ಸೂಚನೆಯನ್ನು ನೀಡಿತ್ತು. ಆದರೆ ಮಳೆ ಮುಂದುವರಿಕೆ ಆಗುವ ಸಾಧ್ಯತೆಯಿದೆ.



