ಕರ್ನಾಟಕದಲ್ಲಿ 4 ದಿನ ಬಾರೀ ಮಳೆ : ರೆಡ್‌ ಅಲರ್ಟ್‌, ಶಾಲೆಗಳಿಗೆ ರಜೆ ಸಾಧ್ಯತೆ

Karnataka Weather Report School Holiday : ಬೆಂಗಳೂರು : ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಉಡುಪಿ, ದ.ಕ, ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯ ಕುರಿತು ಮಾಹಿತಿ ನೀಡಿದೆ.

ಜುಲೈ 10 ರಿಂದ 13ರ ವರೆಗೆ ಕರ್ನಾಟಕ ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಾರೀ ಪ್ರಮಾಣದಲ್ಲಿ ಮಳೆಯಾಗಲಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 13 ರವರೆಗೆ ಭಾರೀ ಮಳೆ ಸುರಿಯಲಿದೆ. ಅದ್ರಲ್ಲೂ ಕೆಲವು ಕಡೆ ಧಾರಾಕಾರ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಾರೀ ಮಳೆಯಾಗಲಿದೆ.

ಇನ್ನು ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ ಮುಂತಾದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡದಲ್ಲಿಯೂ ಭಾರೀ ಮಳೆಯಾಗಬಹುದು.

ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಘು ಇಲ್ಲವೇ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ

ಮುಂದಿನ ನಾಲ್ಕು ದಿನಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಲಘು ಇಲ್ಲವೇ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಗಾಳಿಯ ವೇಗ 40-50 ಕಿ.ಮೀ. ಇರಬಹುದು.

ಗರಿಷ್ಠ ತಾಪಮಾನ 27-29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20-21 ಡಿಗ್ರಿ ಸೆಲ್ಸಿಯಸ್ ಇರಬಹುದು.

ಹವಾಮಾನ ಇಲಾಖೆ ಎಚ್ಚರಿಕೆ

Also read : ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ 4000 ರೂ : ಗುಡ್‌ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಮಳೆಯ ತೀವ್ರತೆಯಿಂದಾಗಿ, ಸಂಚಾರ ದಟ್ಟಣೆ ಮತ್ತು ಕಡಿಮೆ ಗೋಚರತೆ ಉಂಟಾಗಬಹುದು.

ಪ್ರವಾಹ ಪೀಡಿತ ಮತ್ತು ಬೆಟ್ಟ ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಹೆಚ್ಚಿನ ಮತ್ತು ನಿಖರವಾದ ಮಾಹಿತಿಗಾಗಿ, ಭಾರತೀಯ ಹವಾಮಾನ ಇಲಾಖೆಯ (IMD) ಅಧಿಕೃತ ವೆಬ್‌ಸೈಟ್ ಅಥವಾ ಸ್ಥಳೀಯ ಹವಾಮಾನ ಇಲಾಖೆಯೊಂದಿಗೆ ಸಂಪರ್ಕದಲ್ಲಿರಿ.

School Holiday : ಈ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಕರಾವಳಿ ಕರ್ನಾಟಕದ (ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ) ಕೆಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸುವ ಸಾಧ್ಯತೆ ಇದೆ, ವಿಶೇಷವಾಗಿ “ಅತ್ಯಂತ ಭಾರೀ ಮಳೆ”ಯಾಗಲಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Also Read : ಅಂಚೆ ಇಲಾಖೆ ನೀಡ್ತಿದೆ 50 ಲಕ್ಷದ ಜೀವವಿಮೆ : ಮಾಡಿಸುವುದು ಹೇಗೆ ?

ಭಾರೀ ಪ್ರಮಾಣದಲ್ಲಿ ಮಳೆ ಸುರಿದ್ರೆ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೊಷಣೆ ಮಾಡುವ ಸಾಧ್ಯತೆಯಿದೆ.ರೆಡ್ ಅಲರ್ಟ್ ಅಂದರೆ ಅತಿ ಹೆಚ್ಚು ಮಳೆ. ಸಾಮಾನ್ಯವಾಗಿ (204.5 ಮಿ.ಮೀ ಅಥವಾ ಅದಕ್ಕಿಂತ ಹೆಚ್ಚು).

ಆರೆಂಜ್ ಅಲರ್ಟ್ (Orange Alert):

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗುಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆರೆಂಜ್ ಅಲರ್ಟ್ (Orange Alert) ಸೂಚನೆ ನೀಡಿದ್ರೆ ಕೂಡ, ಬಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಸರಿ ಸುಮಾರು (115.6 ಮಿ.ಮೀ ನಿಂದ 204.4 ಮಿ.ಮೀ ವರೆಗೆ).
.

Karnataka Weather Report 4 days of heavy rain Red alert School Holiday in Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories