MLA HY Meti passes away : ಮಾಜಿ ಸಚಿವ, ಹಾಲಿ ಶಾಸಕ ಹೆಚ್.ವೈ. ಮೇಟಿ ನಿಧನ

MLA HY Meti passes away : ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರು ಮತ್ತು ಹಿರಿಯ ಕಾಂಗ್ರೆಸ್ ಮುಖಂಡರಾದ ಹೆಚ್.ವೈ. ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ) ಅವರು ಮಂಗಳವಾರ, ನವೆಂಬರ್ 4, 2025 ರಂದು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೇಟಿ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹೆಚ್.ವೈ. ಮೇಟಿ ಅವರು ರಾಜಕೀಯದಲ್ಲಿ ಸುದೀರ್ಘ ಅನುಭವ ಹೊಂದಿದ್ದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ವಿಜೇತರಾಗುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿಂದೆ 2013 ರಿಂದ 2016ರ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಅಬಕಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಸಚಿವ ಸ್ಥಾನದಲ್ಲಿದ್ದಾಗ 2016ರಲ್ಲಿ ಲೈಂಗಿಕ ಹಗರಣದ ಆರೋಪಕ್ಕೆ ಗುರಿಯಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ನಂತರ ಸಿಐಡಿ ತನಿಖೆಯಲ್ಲಿ ಅವರಿಗೆ ಕ್ಲೀನ್ಚಿಟ್ ಸಹ ದೊರೆತಿತ್ತು. ಮೇಟಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
Also Read : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ? ವರುಣಾ ಕ್ಷೇತ್ರದಿಂದ ಮತ್ತೆ ಕಣಕ್ಕೆ
ಮೇಟಿ ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯರು ಹಾಗೂ ಸಾವಿರಾರು ಅಭಿಮಾನಿಗಳು ಮತ್ತು ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿರಿಯ ಮುಖಂಡನನ್ನು ಕಳೆದುಕೊಂಡ ಬಾಗಲಕೋಟೆ ಜಿಲ್ಲೆ ಶೋಕಸಾಗರದಲ್ಲಿ ಮುಳುಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಮೇಟಿ ಅವರ ನಿಧನಕ್ಕೆ ರಾಜಕೀಯ ಮುಖಂಡರು, ಗಣ್ಯರು ಕಂಬನಿ ಮಿಡಿದಿದ್ದಾರೆ.
ಹೆಚ್.ವೈ. ಮೇಟಿ ನಾಲ್ಕು ಬಾರಿ ಶಾಸಕ, ಒಂದು ಬಾರಿ ಸಚಿವ
ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ 1989ರಲ್ಲಿ ಮೇಟಿ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಸತತ ಎರಡು ಬಾರಿ ಶಾಕರಾಗಿದ್ದಾರೆ. 2004ರಲ್ಲಿಯೂ ಗುಳೇದಗುಡ್ಡ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿದ್ದರು.
Also Read : ಮನೆ ಮುಂದೆ ನಿಲ್ಲಿಸಿದ್ದ ವಾಹನ ಕಳವು, ಸ್ಕೂಟರ್ ಬಿಟ್ಟು ಎಸ್ಕೇಪ್
2013 ಹಾಗೂ 2023ರಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಮೇಟಿ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. 2016ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಅಬಕಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
Senior Congress Leader Bagalkot MLA HY Meti passes away



