ಕೋಟ : ಇಸ್ಪೀಟ್ ಅಡ್ಡೆ ಮೇಲೆ ದಾಳಿ, 6 ಮಂದಿ ಅರೆಸ್ಟ್

Udupi Crime Report : ಕೋಟ : ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ವಶಕ್ಕೆ ಪಡೆದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಅಚ್ಲಾಡಿ ಗ್ರಾಮದ ಗರಿಕೆಮಠದ ಹಾಡಿಯಲ್ಲಿ ನಡೆದಿದೆ.
ರಾಜು, ರಮಾನಂದ, ರಾಜು, ಸಂತೋಷ, ರಾಜೀವ್ ಮತ್ತು ಕೃಷ್ಣ ಸೇರಿ ಒಟ್ಟು ಆರು ಮಂದಿಯನ್ನು ಕೋಟ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.
ದಾಳಿಯ ಸಂದರ್ಭದಲ್ಲಿ ಆರೋಪಿಗಳು ಸ್ಥಳದಿಂದ ಓಡಿ ಹೋಗಲು ಯತ್ನಿಸಿದ್ದರು. ಆದರೆ ಪೊಲೀಸರು ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.
ಕೋಟ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸುಧಾಪ್ರಭು ಅವರು ಜುಲೈ 18, 2025 ರಂದು ಕೋಟ ಪೊಲೀಸ್ ಠಾಣೆಗೆ ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರ ತಾಲೂಕಿನ ಅಚ್ಲಾಡಿ ಗ್ರಾಮದ ಗರಿಕೆಮಠದ ಹಾಡಿಯಲ್ಲಿ ದಾಳಿ ನಡೆಸಿದ್ದರು.
ಇದನ್ನೂ ಓದಿ : ಕೋಟ : ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು
ಪೊಲೀಸರ ದಾಳಿಯ ವೇಳೆಯಲ್ಲಿ ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ್ದ ಒಟ್ಟು ₹15,450 ನಗದು, ಮೂರು ಕಾರುಗಳು, ಎರಡು ಸ್ಕೂಟರ್ ವಶಕ್ಕೆ ಪಡೆಯಲಾಗಿದೆ.
ಅಲ್ಲದೇ ಒಂದು ರೌಂಡ್ ಟೇಬಲ್, ಆರು ಪ್ಲಾಸ್ಟಿಕ್ ಕುರ್ಚಿಗಳು ಮತ್ತು ಇಸ್ಪೀಟ್ ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಕೋಟ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಕೋಟ ಠಾಣೆಯ ವ್ಯಾಪ್ತಿಯಲ್ಲಿ ಇಸ್ಪೀಟ್ ಆಟದ ಪ್ರಕರಣ ಹೆಚ್ಚುತ್ತಿದೆ.
ಇದನ್ನೂ ಓದಿ : ಮೂಡಬಿದಿರೆ : ಕಾಲೇಜು ವಿದ್ಯಾರ್ಥಿನಿ ಮೇಲೆ ಉಪನ್ಯಾಸಕರಿಂದ ಅತ್ಯಾಚಾರ, ಮೂವರು ಅರೆಸ್ಟ್
Udupi Crime Report Kota Police Arrest 6 Arrest persons in Gambling Kannada news



