ಉತ್ತರ ಕನ್ನಡ ಜಿ.ಪಂ.ಗೆ ಕೌಶಲ್ಯ ಕರ್ನಾಟಕ ಪ್ರಶಸ್ತಿ’

ಕಾರವಾರ : ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ ತೋರಿದ ಅತ್ಯುತ್ತಮ ಸಾಧನೆಗೆ ಕರ್ನಾಟಕದ ಪ್ರತಿಷ್ಠಿತ ಕೌಶಲ್ಯ ಕರ್ನಾಟಕ (Kaushalya Karnataka Award) ಪ್ರಶಸ್ತಿ ದೊರೆತಿದೆ. ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ‘ಕೌಶಲ್ಯ ಶೃಂಗಸಭೆ’ ಕಾರ್ಯಕ್ರಮದಲ್ಲಿ, ಸಂಜೀವಿನಿ (NRLM) ಯೋಜನೆಯಡಿ ರಾಜ್ಯದಲ್ಲೇ ಅತ್ಯುತ್ತಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ದೊರೆತಿದೆ.

ಈ ಪ್ರಶಸ್ತಿಯು ಜಿಲ್ಲೆಯ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲಾಗಿದೆ. ಅದರಲ್ಲೂ, ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮದ ಹಿರಿಹೋನ್ನಪ್ಪ ಸ್ವಸಹಾಯ ಗುಂಪು ಸಮಗ್ರ ಮೌಲ್ಯಮಾಪನಗಳಲ್ಲಿ ಶೇ. 97 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ.

ಸಂಜೀವಿನಿ ಯೋಜನೆಯಡಿ ಸ್ವ-ಸಹಾಯ ಗುಂಪುಗಳ ಬಲವರ್ಧನೆ ಮತ್ತು ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಜಿಲ್ಲಾ ಮಟ್ಟದಲ್ಲಿ ಮಾಡಿದ ಸಾಮೂಹಿಕ ಪ್ರಯತ್ನಕ್ಕೆ ರಾಜ್ಯದ ಈ ಗೌರವ ದೊರಕಿದೆ.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರಿಂ ಅಸದಿ ಅವರು ಮಾತನಾಡಿ, “ಈ ಪ್ರಶಸ್ತಿ ನಮ್ಮೆಲ್ಲರ ಸಹಕಾರದ ಫಲ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ನಾವು ಬದ್ಧರಾಗಿದ್ದೇವೆ” ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು, “ಉತ್ತರ ಕನ್ನಡ ಜಿಲ್ಲೆಯ ಸಾಧನೆ ಅತ್ಯಂತ ಮಾದರಿಯಾಗಿದ್ದು, ಮಹಿಳಾ ಸ್ವ-ಸಹಾಯ ಗುಂಪುಗಳ ಸಂಘಟನೆ ಮತ್ತು ಆರ್ಥಿಕ ಸಬಲೀಕರಣದ ನಮ್ಮ ಪ್ರಯತ್ನ ಶ್ಲಾಘನೀಯವಾಗಿದೆ. ನಮ್ಮ ಜಿಲ್ಲೆಯು ಇತರೆ ಜಿಲ್ಲೆಗಳಿಗೆ ಪ್ರೇರಣೆಯಾಗಿ ನಿಲ್ಲುವ ವಿಶ್ವಾಸವಿದೆ” ಎಂದು ತಿಳಿಸಿದ್ದಾರೆ.

Uttara Kannada Zilla Panchayat Wins Prestigious Kaushalya Karnataka Award

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories