BC Road Lavanya Murder Case : ಬಿಸಿ ರೋಡ್‌ನಲ್ಲಿ ಯುವತಿ ಲಾವಣ್ಯ ಹತ್ಯೆ : ಆರೋಪಿ ಚೇತನ್‌ ಅರೆಸ್ಟ್‌

ಲಾವಣ್ಯಳನ್ನು ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಚೇತನ್‌ ಬಂಧನ ಭೀತಿಯಿಂದ ವಿಷ ಸೇವನೆ ಮಾಡಿದ್ದ . ಇದೇ ಕಾರಣದಿಂದಲೇ ಪೊಲೀಸರು ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಡೆದಿದ್ದ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಆರೋಪಿ ಚೇತನನನ್ನು ಬಂಟ್ವಾಳ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಕಲ್ಲಡ್ಕದ ಲ್ಯಾಬ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ನಿನ್ನೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ನಿವಾಸಿ ಆಗಿರುವ ಚೇತನ್‌ ಎಂಬಾತ ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದ. ನಂತರ ಮಾರಕಾಸ್ತ್ರವನ್ನು ಸ್ಥಳದಲ್ಲಿಯೇ ಬಿಟ್ಟು ಎಸ್ಕೇಪ್‌ ಆಗಿದ್ದ.

ದಕ್ಷಿಣ ಕನ್ನಡ ಎಸ್‌ಪಿ ಡಾ.ಅರುಣ್‌ ಕುಮಾರ್‌ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರದಲ್ಲಿ ನಾಪತ್ತೆಯಾಗಿರುವ ಚೇತನ್‌ ಪತ್ತೆಗೆ ವಿಶೇಷ ಪೊಲೀಸ್‌ ತಂಡವನ್ನು ರಚಿಸಿದ್ದರು. ಬಂಟ್ವಾಳ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿ ಇದೀಗ ಚೇತನ್‌ನನ್ನು ಬಂಧಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದರೆ ಪೊಲೀಸ್‌ ಇಲಾಖೆಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗ ಬೇಕಾಗಿದೆ.

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ನಾ ಆರೋಪಿ ಚೇತನ್‌

ಲಾವಣ್ಯಳನ್ನು ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಚೇತನ್‌ ಬಂಧನ ಭೀತಿಯಿಂದ ವಿಷ ಸೇವನೆ ಮಾಡಿದ್ದ . ಇದೇ ಕಾರಣದಿಂದಲೇ ಪೊಲೀಸರು ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.

 

Exit mobile version