ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ವೈಭವ : ಹರಿದು ಬರ್ತಿದ್ದಾರೆ ಲಕ್ಷ, ಲಕ್ಷ ಭಕ್ತರು

Dharmasthala Lakshadeepotsava : ಬೆಳ್ತಂಗಡಿ : ಭಾರತದ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲೀಗ ಲಕ್ಷ ದೀಪೋತ್ಸವದ ಸಂಭ್ರಮ. ಲಕ್ಷ ದೀಪೋತ್ಸವ ಈಗಾಗಲೇ ಆರಂಭಗೊಂಡಿದ್ದು, ಐದು ದಿನಗಳ ಕಾಲ ವೈಭವದಿಂದ ನಡೆಯಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಲಕ್ಷದೀಪೋತ್ಸವದಿಂದಾಗಿ ಇಡೀ ಧರ್ಮಸ್ಥಳವೇ ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ಧರ್ಮಸ್ಥಳದಲ್ಲಿ ನಡೆಯುವ ಲಕ್ಷ ದೀಪೋತ್ಸವಕ್ಕೆ ಐತಿಹಾಸಿಕ ಹಿನ್ನೆಲೆಯಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ರಾಷ್ಟ್ರ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದ ಕಲಾವಿದರ ಸಾಂಸ್ಕೃತಿಕ ವೈಭವ ಜನಮನ ಸೂರೆಗೊಳ್ಳುತ್ತಿದೆ.

ಶನಿವಾರ ಲಕ್ಷ ದೀಪೋತ್ಸವ ಆರಂಭಗೊಂಡಿದ್ದು, ಮೊದಲ ದಿನ ಹೊಸಕಟ್ಟೆ ಉತ್ಸವ ನಡೆದಿದೆ. ಇಂದು ಕೆರೆಕಟ್ಟೆ ಉತ್ಸವ, ನಾಳೆ ಲಲಿತೋದ್ಯಾನ ಉತ್ಸವ, ಮಂಗಳವಾರದಂದು ಕಂಚಿಮಾರು ಕಟ್ಟೆ ಉತ್ಸವ, ಬುಧವಾರದಂದು ಗೌರಿಮಾರುಕಟ್ಟೆ ಉತ್ಸವ ಹಾಗೂ ಗುರುವಾರದಂದು ಬೆಳಗ್ಗಿನ ಜಾವ ಲಕ್ಷದೀಪೋತ್ಸವ ಸಂಪನ್ನಗೊಳ್ಳಲಿದೆ. ಅಂದು ಸಂಜೆ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ.

ಇದನ್ನೂ ಓದಿ : Dog Bites : ಒಂದೇ ವರ್ಷದಲ್ಲಿ 2 ಲಕ್ಷಕ್ಕೂ ಅಧಿಕ ಜನರಿಗೆ ನಾಯಿ ಕಡಿತ : 26 ಮಂದಿ ಸಾವು

ಪ್ರತಿವರ್ಷದಂತೆ ಈ ವರ್ಷವೂ ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ನವೆಂಬರ್​ 18 ಹಾಗೂ 19ರ ಸಂಜೆ 5 ಗಂಟೆಗೆ ನಡೆಯಲಿರುವ ಈ ಸಮ್ಮೇಳನವನ್ನು ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್​ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತಿ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ ಎ. ಸೂರ್ಯ ಪ್ರಕಾಶ್​ ಪಂಡಿತ್​ ಮತ್ತು ಅಂಕಣಕಾರರಾದ ತನ್ವೀರ್​ ಅಹ್ಮದುಲ್ಲಾ ಅವರು ಭಾಷಣ ಮಾಡಲಿದ್ದಾರೆ.

ರಾತ್ರಿ 8.30ಕ್ಕೆ ಚೆನ್ನೈನ ವಿದುಷಿ ಶೀಲಾ ಉನ್ನಿಕೃಷ್ಣನ್ ನಿರ್ದೇಶನದ ಭರತನಾಟ್ಯ ನೃತ್ಯ ಗಾಯನ ಪ್ರದರ್ಶನ ಇರಲಿದೆ. 1933ರಲ್ಲಿ ಮೊದಲ ಬಾರಿಗೆ ಅಂದಿನ ಧರ್ಮಾಧಿಕಾರಿ ಕೀರ್ತಿಶೇಷ ಮಂಜಯ್ಯ ಹೆಗ್ಗಡೆ ಅವರು ಸರ್ವಧರ್ಮ ಸಮ್ಮೇಳನವನ್ನು ಆಯೋಜಿಸಿದ್ದರು.

ಇದನ್ನೂ ಓದಿ : ದ್ವಿಚಕ್ರ ವಾಹನ ಓಡಿಸಿದ ಪುತ್ರ : ತಾಯಿಗೆ 26 ಸಾವಿರ ರೂಪಾಯಿ ದಂಡ ವಿಧಿಸಿದ ಕೋರ್ಟ್‌

ಬರೋಬ್ಬರಿ 9 ದಶಕಗಳ ಇತಿಹಾಸವಿರುವ ಈ ಸಮ್ಮೇಳನವನ್ನು ಧರ್ಮಸ್ಥಳದ ಪ್ರಸ್ತುತ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

Dharmasthala Lakshadeepotsava Updates

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories