ವಿದ್ಯಾರ್ಥಿಗಳ ಗಮನಕ್ಕೆ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ; ಜುಲೈ 2 ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಡಿಸಿ ಆದೇಶ
school College holiday July 2 : ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳೂರು : ಕಳೆದ ಎರಡು ದಿನಗಳಿಂದ ನಿರಂತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿದೆ. ಜುಲೈ 2 ರಂದು ಜಿಲ್ಲೆಯಾದ್ಯಂತ ಬಾರಿ ಮಳೆ ಸುರಿಯುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಂಗಳೂರು ನಗರದ ನಾಗುರಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಮನೆಯಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರು ತಾಲೂಕುಗಳಲ್ಲಿ ಮಳೆ ಬಾರೀ ಅವಾಂತರವನ್ನೇ ಸೃಷ್ಟಿಸಿದೆ.
ಜುಲೈ 2ರಂದು ಕೂಡ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಗುಡ್ಡ ಪ್ರದೇಶದಲ್ಲಿ ವಾಸಿಸುವವರು, ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ಜೂನ್ 30 ರಿಂದ ಜುಲೈ 6ರ ವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಾಧ್ಯಂತ ಧಾರಾಕಾರ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಲಾಗಿದ್ದು, ನಾಳೆ ಕರಾವಳಿ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
Heavy Rain Red Alert Dakshina Kannada school College holiday July 2

