ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ : ಅಗಸ್ಟ್‌ 18ರಂದು ಭಾರೀ ಮಳೆ, ರೆಡ್‌ ಅಲರ್ಟ್‌

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಗಸ್ಟ್‌ 18ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ (School Holiday) ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ಮಾತ್ರವಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ದರ್ಶನ್‌ ಎಚ್.ವಿ ಅವರು ಆದೇಶ ಹೊರಡಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಚಂಡ ಮಾರುತ ಬೀಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಮಡಿಕೇರಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ : ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲೂ ರೆಡ್‌ ಅಲರ್ಟ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿ ಅವಾಂತರ

ಗುಡ್ಡ ಕುಸಿತ ಮತ್ತು ರಸ್ತೆ ತಡೆ: ಶಿರಾಡಿ ಘಾಟ್‌ನಂತಹ ಪ್ರಮುಖ ರಸ್ತೆಗಳಲ್ಲಿ ಗುಡ್ಡ ಕುಸಿತ ಮತ್ತು ಮರಗಳು ಉರುಳಿ ಬಿದ್ದ ಕಾರಣ ಬೆಂಗಳೂರು-ಮಂಗಳೂರು ನಡುವಿನ ರಸ್ತೆ ಸಂಚಾರಕ್ಕೆ ವ್ಯತ್ಯಯವಾಗಿದೆ.

ರೈಲು ಸಂಚಾರದಲ್ಲಿ ವ್ಯತ್ಯಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಹಲವೆಡೆ ಹಳಿಗಳ ಮೇಲೆ ಮರಗಳು ಬಿದ್ದಿದ್ದು ಮತ್ತು ಮಣ್ಣು ಕುಸಿತವಾದ ಕಾರಣ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಕೆಲವು ರೈಲುಗಳ ಮಾರ್ಗಗಳನ್ನು ಬದಲಾಯಿಸಿ ಬೇರೆ ದಾರಿಯಲ್ಲಿ ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿದೆ.

ಪ್ರವಾಹದ ಭೀತಿ: ದಕ್ಷಿಣ ಕನ್ನಡದ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗುಂಡ್ಯ ಹೊಳೆಯ ನೀರಿನ ಮಟ್ಟ ತೀವ್ರವಾಗಿ ಏರಿಕೆ ಕಂಡಿದೆ. ಇದರಿಂದಾಗಿ, ನದಿ ತೀರದ ಹಲವು ಗ್ರಾಮಗಳಲ್ಲಿರುವ ಮನೆಗಳು ಮತ್ತು ಕೃಷಿ ಭೂಮಿಗಳಿಗೆ ನೀರು ನುಗ್ಗಿದೆ.

ಸ್ಥಳಾಂತರ: ಪ್ರವಾಹದ ಭೀತಿಯಿಂದಾಗಿ, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಕೆಲವು ಕುಟುಂಬಗಳನ್ನು ಜಿಲ್ಲಾಡಳಿತದ ವತಿಯಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ವಿದ್ಯುತ್ ವ್ಯತ್ಯಯ: ಭಾರೀ ಗಾಳಿ ಮತ್ತು ಮಳೆಯಿಂದ ಹಲವು ವಿದ್ಯುತ್ ಕಂಬಗಳು ಮತ್ತು ತಂತಿಗಳು ಬಿದ್ದಿರುವುದರಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿದೆ.

ಧಾರಾಕಾರ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯು ಮುಂದಿನ 2 ದಿನಗಳಿಗೂ ರೆಡ್ ಅಲರ್ಟ್ ಘೋಷಿಸಿದೆ.

Heavy Rain Red Alert School Holiday Declared Dakshina Kannada

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021