ಉಡುಪಿ, ದ.ಕ. ಉ.,ಕ ಜಿಲ್ಲೆಯಲ್ಲಿ ಭಾರೀ ಮಳೆ : ಅಗಸ್ಟ್‌ 18 ರಂದು ರೆಡ್‌ ಅಲರ್ಟ್‌ ಘೋಷಣೆ

Heavy Rainfall Red Alert : ಉಡುಪಿ/ ಕಾರವಾರ/ ಮಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಗಸ್ಟ್‌ 18ರಂದು ಬಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆಯನ್ನು ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರು ಆದೇಶ ಹೊರಡಿಸಿದ್ದಾರೆ. ಆಗಸ್ಟ್ 19 ರಂದು ಕೂಡ ರೆಡ್ ಅಲರ್ಟ್ ಮುಂದುವರೆಯುವ ಸಾಧ್ಯತೆ ಇದೆ.

ಎರಡು ದಿನಗಳ ಕಾಲ ಅತೀ ಹೆಚ್ಚು ಅಥವಾ ಅತಿಯಾದ ಮಳೆಯೊಂದಿಗೆ ಪ್ರಬಲ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಪ್ರವಾಹ ಅಥವಾ ಭೂಕುಸಿತ ಸಂಭವಿಸುವ ಸಾಧ್ಯತೆಗಳ ಬಗ್ಗೆ ನಿಗಾ ವಹಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ಸಿದ್ಧಪಡಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲೂ ರೆಡ್‌ ಅಲರ್ಟ್‌ :

ಭಾರತೀಯ ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ಆಗಸ್ಟ್ 18 ರಂದು ಉಡುಪಿ ಜಿಲ್ಲೆ ಮಾತ್ರವಲ್ಲದೇ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಿಸಿದೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅತ್ಯಧಿಕ 204.5 ಮಿ.ಮೀ ಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅಗಸ್ಟ್‌ 17ರಂದು ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕುಗಳಲ್ಲಿ ಬಾರೀ ಮಳೆಯಾಗಿದೆ.

ಜಿಲ್ಲೆಯ ಹಲವೆಡೆ ಭಾರೀ ಮಳೆಯಿಂದಾಗಿ ಕೃತಕ ನೆರೆ ಹಾವಳಿ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಜಿಲ್ಲೆಯಲ್ಲಿಯೂ ಮಳೆ ಅವಾಂತರವನ್ನೇ ಸೃಷ್ಟಿಸಿದೆ.

ದಕ್ಷಿಣ ಕನ್ನಡ ಜಿಲ್ಲೆ: ಸುಬ್ರಹ್ಮಣ್ಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಗುಂಡ್ಯ ಹೊಳೆಯ ನೀರಿನ ಮಟ್ಟ ಏರಿಕೆಯಾಗಿ ಕೆಲವು ಹೊಲಗದ್ದೆಗಳು ಮತ್ತು ಮನೆಗಳಿಗೆ ನೀರು ನುಗ್ಗಿದೆ.

ಉಡುಪಿ ಮತ್ತು ಉತ್ತರ ಕನ್ನಡ: ಈ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಆಗಸ್ಟ್ 17 ರಂದು ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು.

ಆಗಸ್ಟ್ 18 ಮತ್ತು 19ರಂದು ರೆಡ್ ಅಲರ್ಟ್ ಘೋಷಿಸಿರುವ ಕಾರಣ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.

ರೈಲು ಸಂಚಾರಕ್ಕೆ ವ್ಯತ್ಯಯ: ಮಂಗಳೂರು-ಹಾಸನ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ, ರೈಲು ಸಂಚಾರಕ್ಕೆ ತಾತ್ಕಾಲಿಕವಾಗಿ ತೊಂದರೆಯಾಗಿತ್ತು. ಆದರೆ ದಕ್ಷಿಣ ಪಶ್ಚಿಮ ರೈಲ್ವೆ ಅಧಿಕಾರಿಗಳು ತಕ್ಷಣ ಸೇವೆ ಆರಂಭಗೊಂಡಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

Heavy Rainfall Red Alert Declared August 18 udupi dakshina Kannada and Uttara kannada

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories