Holding Talwar and posting reels: ಸಾಮಾಜಿಕ ಜಾಲತಾಣದಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡುವ ರೀಲ್ಸ್ ಅಪ್ಲೋಡ್ ಮಾಡಿದ್ದ ಇಬ್ಬರು ಆರೋಪಿಗಳಿಗೆ ಖೆಡ್ಡಾ ತೋಡುವಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು(Mangaluru) ಪೊಲೀಸರು ಯಶಸ್ವಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಯ ಹುಟ್ಟಿಸಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಡಿಸೆಂಬರ್ 13ರಂದು ಫೇಸ್ಬುಕ್ನಲ್ಲಿ Suresh Psy ಎಂಬ ಫೇಸ್ಬುಕ್ ಖಾತೆಯಲ್ಲಿ ಈ ವಿಡಿಯೋ ಶೇರ್ ಮಾಡಲಾಗಿತ್ತು. ಮಂಗಳೂರಿನ ಬಂದರು ನಿವಾಸಿ ಅಮೀರ್ ಸುಹೇಲ್ ಎಂಬಾತ ತಲ್ವಾರ್ ಹಿಡಿದು ನರ್ತಿಸುವ ವಿಡಿಯೋ ಮಾಡಿದ್ದ. ಈ ವಿಡಿಯೋವನ್ನು ಕಾವೂರು ನಿವಾಸಿ ಸುರೇಶ್ ಲೈಕ್ ಹಾಗೂ ಹಾರ್ಟ್ ಚಿಹ್ನೆಯನ್ನು ಹಾಕಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ಟೋರಿ ಶೇರ್ ಮಾಡಿದ್ದರು.
ಸಾರ್ವಜನಿಕರಿಗೆ ಆತಂಕ ಸೃಷ್ಠಿಸಿದ ಆರೋಪದ ಅಡಿಯಲ್ಲಿ ಇಬ್ಬರು ಆರೋಪಿಗಳನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳ ವಿರುದ್ಧ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಯಿಂದ ರೀಲ್ಸ್ಗೆ ಬಳಸಲಾದ ತಲ್ವಾರ್ ಮತ್ತು ವಿಡಿಯೋ ಪೋಸ್ಟ್ ಮಾಡಲು ಬಳಸಿ ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ.
ಕೆಲವು ತಿಂಗಳುಗಳ ಹಿಂದೆಯಷ್ಟೇ ಬಿಗ್ಬಾಸ್ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಎಂಬವರು ಕೂಡ ಇದೇ ರೀತಿ ತಲ್ವಾರ್ ಹಿಡಿದು ರೀಲ್ಸ್ ಮಾಡಲು ಹೋಗುವ ಪೊಲೀಸ್ ಠಾಣೆಯ ಅತಿಥಿಗಳಾಗಿದ್ದರು.
