Mahesh Shetty Timarodi arrest : ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ ?

Mahesh Shetty Timarodi arrest : ಮಂಗಳೂರು : ಬಿಜೆಪಿಯ ಹಿರಿಯ ಮುಖಂಡ ಬಿಎಲ್ ಸಂತೋಷ್ (BL Santhosh) ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಸಮೀಪದಲ್ಲಿರುವ ತಿಮರೋಡಿ ಅವರ ನಿವಾಸಕ್ಕೆ ಉಡುಪಿ ಎಎಸ್‌ಪಿ ಸುಧಾಕರ್ ನಾಯಕ್ ಅವರ ನೇತೃತ್ವದ ಉಡುಪಿ ಜಿಲ್ಲಾ ಪೊಲೀಸರ ತಂಡ ಭೇಟಿ ನೀಡಿದೆ.
ಬಿಎಸ್ ಸಂತೋಷ್ ಅವರ ವಿರುದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರು ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಹೇಶ್ ತಿಮರೋಡಿ ವಿರುದ್ದ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಠಾಣೆಯ ಎಎಸ್‌ಐ ಅವರು ನಿನ್ನೆಯೇ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನೋಟೀಸ್ ನೀಡಿದ್ದರು. ಆದರೆ ತಿಮರೋಡಿ ನೋಟಿಸ್ ಪಡೆದುಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರೇ ಮನೆಗೆ ತೆರಳಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳ ಪ್ರಕರಣ ಕುರಿತು ಮೌನ ಮುರಿದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ
ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ವಕೀಲರು ಹಾಗೂ ಪೊಲೀಸರ ನಡುವೆ ಕೆಲ ಕಾಲ ವಾಗ್ವಾದ ನಡೆದಿದೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಒಳಭಾಗದಲ್ಲಿದ್ದು, ಮನೆಯಿಂದ ಹೊರಗೆ ಬರುತ್ತಲೇ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರಕಾರ, ಬಿಜೆಪಿ ನಾಯಕರ ವಿರುದ್ದವೂ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ತಿಮರೋಡಿ ಬಂಧನಕ್ಕೆ ಸೂಚಿಸಿದ್ದ ಗೃಹ ಸಚಿವ ಪರಮೇಶ್ವರ್
ವಿಧಾನಸಭಾ ಕಲಾಪದಲ್ಲಿಯೂ ಮಹೇಶ್ ಶೆಟ್ಟಿ ಬಂಧನಕ್ಕೆ ಆಗ್ರಹ ಕೇಳಿಬಂದಿತ್ತು. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ದವೂ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದರು.
ಬಿಜೆಪಿ ನಾಯಕರು ಬಿಎಲ್ ಸಂತೋಷ್ ಅವರ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂಧಿಸಿದ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳುವಂತೆ ಬಿಜೆಪಿಯ ಶಾಸಕರು ಸರಕಾರಕ್ಕೆ ಆಗ್ರಹಿಸಿದ್ದರು. ಈ ವೇಳೆಯಲ್ಲಿ ಗೃಹ ಸಚಿವರು ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದರು.
ಇದನ್ನೂ ಓದಿ : ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡಿ : ಸರಕಾರಕ್ಕೆ ಸುನಿಲ್ ಕುಮಾರ್ ಮನವಿ
Mahesh Shetty Timarodi arrest Udupi police



